State

ಬಿಡದಿ ಟೌನ್‌ಶಿಪ್‌ ಯೋಜನೆ ‘ಎಐ ಸಿಟಿ’ಯಾಗಿ ಪುನರುಜ್ಜೀವನ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

Share

ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಅತ್ಯಾಧುನಿಕ ‘ಎಐ ಸಿಟಿ’ಯಾಗಿ ಮರುಜೀವ ನೀಡಲಾಗುತ್ತಿದ್ದು, ಇದು ಬೆಂಗಳೂರು ದಕ್ಷಿಣ ಜಿಲ್ಲೆಯ ರೂಪುರೇಷೆಯನ್ನೇ ಬದಲಾಯಿಸಲಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ವಿಶ್ವದರ್ಜೆಯ ರಸ್ತೆ, ಮೆಟ್ರೋ, ಕ್ರೀಡಾಂಗಣ ಹಾಗೂ ವಸತಿ ಸೌಲಭ್ಯಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ರೈತರ ಹಿತರಕ್ಷಣೆಗೆ ಸರ್ಕಾರ ಆದ್ಯತೆ ನೀಡಿದ್ದು, ಹಿಂದಿನ ಸರ್ಕಾರ ಎಕರೆಗೆ ₹25 ಲಕ್ಷ ನಿಗದಿಪಡಿಸಿದ್ದರೆ, ನಮ್ಮ ಸರ್ಕಾರ ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ ನೀಡಲು ನಿರ್ಧರಿಸಿದೆ. ಹಣದ ಬದಲಿಗೆ ಜಮೀನು ಬಯಸುವ ರೈತರಿಗೆ ಶೇ. 50ರಷ್ಟು ಅಭಿವೃದ್ಧಿಪಡಿಸಿದ ಭೂಮಿಯನ್ನು ನೀಡಲಾಗುವುದು. ಈ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಐಚ್ಛಿಕವಾಗಿದ್ದು, ಯಾರ ಮೇಲೆಯೂ ಬಲವಂತವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಲು ಹಾಗೂ ರೈತರಿಗೆ ಗೌರವಯುತ ಜೀವನ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

Tags:

error: Content is protected !!