Khanapur

ಹಲಸಿ PKPS ಗೆ ನೂತನ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಬಿಜೆಪಿ ಯುವ ನಾಯಕ ಅಭಿಲಾಷ ಬಾಳೆಕುಂದರಿಗಿ ನೇಮಕ

Share

ಖಾನಾಪುರ ತಾಲೂಕಿನ ಬಿಜೆಪಿ ಯುವ ನಾಯಕ ಅಭಿಲಾಷ ಬಾಳೆಕುಂದರಿಗಿ ಅವರನ್ನು ಹಲಸಿ ಪೂರ್ವ ಭಾಗದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ (PKPS) ನೂತನ ಬಿಡಿಸಿಸಿ ಬ್ಯಾಂಕ್ ನಾಮನಿರ್ದೇಶಿತ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಇಂದು ಸಂಘದ ಆಡಳಿತ ಮಂಡಳಿ ವತಿಯಿಂದ ಅವರಿಗೆ ಆತ್ಮೀಯ ಸನ್ಮಾನ ನೆರವೇರಿತು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್ ಅವರ ಶಿಫಾರಸಿನ ಮೇರೆಗೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ್ ಜೊಲ್ಲೆ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಖಾನಾಪುರ ತಾಲೂಕಿನ ಹಲಸಿ ಪೂರ್ವ ಭಾಗದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನ ಬಿಡಿಸಿಸಿ ಬ್ಯಾಂಕ್ ನಾಮನಿರ್ದೇಶಿತ ಸದಸ್ಯರಾಗಿ ನಿಯೋಜನೆಗೊಂಡ ಹಿನ್ನೆಲೆಯಲ್ಲಿ, ಆಡಳಿತ ಮಂಡಳಿಯ ವತಿಯಿಂದ ಅಭಿಲಾಷ ಬಾಳೆಕುಂದರಿಗಿ ಅವರನ್ನು ಸತ್ಕರಿಸಿ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Tags:

error: Content is protected !!