Chikkodi

ಅನೈತಿಕ ಸಂಬಂಧಕ್ಕೆ ಅಡ್ಡ ಬಂದ ಪತಿಯ ಕೊಲೆ ಪ್ರಕರಣ; ಜಮೀನಿನಲ್ಲಿ ಹೂತಿಟ್ಟಿದ್ದ ಶವ ಹೊರಕ್ಕೆ!

Share

 

ಖಡಕಲಾಟದಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ
ಆರು ತಿಂಗಳ ಬಳಿಕ ಹೂತಿಟ್ಟಿದ್ದ ಶವ ಹೊರಕ್ಕೆ
ಎಸಿ ಸುಭಾಷ ಸಂಪಗಾವಿ ನೇತೃತ್ವದಲ್ಲಿ ಶವ ಪರಿಶೀಲನೆ
ಬಂಗಾರಿ ಗಾವಡೆ ಹಾಗೂ ರಾಮಾ ರಾಣಗೆ ಬಂಧನ

ಚಿಕ್ಕೋಡಿ :ಅನೈತಿಕ ಸಂಬಂಧಕ್ಕೆ ಪತಿಯೇ ಅಡ್ಡಿಯಾಗುತ್ತಿದ್ದಾನೆಂಬ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಗಂಡನನ್ನು ಭೀಕರವಾಗಿ ಹತ್ಯೆಗೈದು ಜಮೀನಿನಲ್ಲಿ ಹೂತಿಟ್ಟಿದ್ದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ನಡೆದಿತ್ತು.ಹೂತಿಟ್ಟ ಶವವನ್ನು ಇವತ್ತು ಎಸಿ ಸುಭಾಷ ಸಂಪಗಾವಿ ನೇತೃತ್ವದಲ್ಲಿ ಹೊರತೆಗೆಯಲಾಯಿತು.

ಕುರಿ ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದ ರಾಘು ಗಾವಡೆ (40) ಹತ್ಯೆಯಾದ ದುರ್ದೈವಿ. ಪತ್ನಿ ಬಂಗಾರಿ ಗಾವಡೆ ಹಾಗೂ ಆಕೆಯ ಪ್ರಿಯಕರ ರಾಮಾ ರಾಣಗೆ ಕೊಲೆಗೈದ ಆರೋಪಿಗಳಾಗಿದ್ದಾರೆ.

ಸುಮಾರು ಆರು ತಿಂಗಳ ಹಿಂದೆ ಈ ಕೊಲೆ ನಡೆದಿದ್ದು, ಆರೋಪಿಗಳು ಯಾರಿಗೂ ಅನುಮಾನ ಬಾರದಂತೆ ಶವವನ್ನು ಜಮೀನಿನಲ್ಲಿ ಹೂತುಹಾಕಿದ್ದರು. ಇತ್ತೀಚೆಗೆ ಈ ಬಗ್ಗೆ ಸುಳಿವು ದೊರೆತ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಖಡಕಲಾಟ ಠಾಣೆ ಪೊಲೀಸರು, ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ.

ಆರೋಪಿಗಳು ನೀಡಿದ ಮಾಹಿತಿ ಆಧರಿಸಿ, ಎಸಿ ಎಸ್.ಎಸ್. ಸಂಪಗಾವಿ ಅವರ ನೇತೃತ್ವದಲ್ಲಿ ಹಾಗೂ ಖಡಕಲಾಟ್ ಪೊಲೀಸರ ಬಿಗಿ ಭದ್ರತೆಯಲ್ಲಿ ಜಮೀನಿನಲ್ಲಿ ಹೂತಿಡಲಾಗಿದ್ದ ಶವವನ್ನು ಗುರುವಾರ ಹೊರತೆಗೆಯಲಾಯಿತು. ತಧಿವಿಧಿ ವಿಜ್ಞಾನ ಪ್ರಯೋಗಾಲಯದ (FSL) ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ.

ಈ ಕುರಿತು ಖಡಕಲಾಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Tags:

error: Content is protected !!