ರಾಯಬಾಗ: ವಸತಿ ಶಾಲೆಯಲ್ಲಿ 15 ವರ್ಷದ ಬಾಲಕನ ಅನುಮಾನಾಸ್ಪದ ಸಾವು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು

ರಾಯಬಾಗ ತಾಲೂಕಿನ ಸುಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಬಾಲಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದ್ದು, ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಬಾಲಕನ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಸಾವಿನ ಹಿಂದಿರುವ ಕಾರಣ ತನಿಖೆಯಿಂದ ಹೊರಬರಬೇಕಿದೆ.
