ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಉಗಾರ ಖುರ್ದ ಗ್ರಾಮದ ನಿವಾಸಿ ಸಾಗರ ಪಕಾಳೆ ಬಂಧಿತ ಆರೋಪಿ. ಸುಮಾರು 11 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಈತನಿಗಾಗಿ ಪೊಲೀಸರು ಹಲವು ವರ್ಷಗಳಿಂದ ಹುಡುಕಾಟ ನಡೆಸುತ್ತಿದ್ದರು.
ಆರೋಪಿ ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಜೈತಾಪುರ ಗ್ರಾಮದಲ್ಲಿ ವಾಸವಿರುವ ಬಗ್ಗೆ ಸುಳಿವು ಪಡೆದ ಕಾಗವಾಡ ಪೊಲೀಸರು ಆಧುನಿಕ ತಂತ್ರಜ್ಞಾನ ಹಾಗೂ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
20 ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿರುವ ಕಾಗವಾಡ ಪೊಲೀಸರ ಕಾರ್ಯಾಚರಣೆಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

