Belagavi

ಲಿಂಗರಾಜ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಕಣಬರಗಿ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ

Share

ಲಿಂಗರಾಜ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಮಹಾನಗರ ಪಾಲಿಕೆ ಹಾಗೂ ಯೂಥ್ ಫಾರ್ ಸೇವಾ ಸಹಯೋಗದಲ್ಲಿ ಬೆಳಗಾವಿ ಸಮೀಪದ ಕಣಬರಗಿ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ, ‘ಹರ್ ಘರ್ ತಿರಂಗಾ’ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಎನ್‌ಎಸ್‌ಎಸ್ ಸ್ವಯಂಸೇವಕ ವಿದ್ಯಾರ್ಥಿಗಳು ಪಾಲ್ಗೊಂಡು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಮನೆಮನೆಗೆ ತಿರಂಗಾ ಅಭಿಯಾನದ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಶಶಿಕಾಂತ್ ಕೊಣ್ಣೂರು, “ಗ್ರಾಮಗಳು ವಿಕಾಸವಾದರೆ ಭಾರತ ವಿಕಾಸವಾಗುತ್ತದೆ. ಗ್ರಾಮಗಳ ಅಭಿವೃದ್ಧಿ ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಆದರೆ ಅದನ್ನು ಇಂದಿಗೂ ಸಂಪೂರ್ಣವಾಗಿ ಸಾಧಿಸುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ. ಗ್ರಾಮಗಳ ಅಭಿವೃದ್ಧಿಗೆ ಸರ್ಕಾರದೊಂದಿಗೆ ಯುವಜನರೂ ಹೆಚ್ಚಿನ ಜವಾಬ್ದಾರಿ ವಹಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಸಂತೋಷ್ ಕೋತ್, ಮಹಾನಗರ ಪಾಲಿಕೆಯ ಸಿಬ್ಬಂದಿ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಇಡೀ ದಿನ ಗ್ರಾಮದಲ್ಲಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Tags:

error: Content is protected !!