Vijaypura

ಸೈಕ್ಲಿಂಗ್ ಸಾಧನೆ: ರಾಜು ಬಿರಾದಾರಗೆ ಸಿದ್ದೇಶ್ವರ ಸಹಕಾರ ಬ್ಯಾಂಕ್‌ನಿಂದ ಸನ್ಮಾನ

Share

ಸೈಕ್ಲಿಂಗ್ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡಿರುವ ಹಾಗೂ ಕರ್ನಾಟಕ ಅಮೆಚೂರ್ ಸೈಕ್ಲಿಂಗ್ ಸಂಸ್ಥೆಯ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ರಾಜು ಬಿರಾದಾರ ಅವರನ್ನು ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕ್‌ನ ಸರ್ವಸಾಧಾರಣ ಸಭೆಯಲ್ಲಿ ಸನ್ಮಾನಿಸಲಾಯಿತು.

ವಿಜಯಪುರ ನಗರದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಗಳನ್ನು ಯಶಸ್ವಿಯಾಗಿ ಸಂಘಟಿಸುವ ಮೂಲಕ ಕ್ರೀಡಾ ಕ್ಷೇತ್ರಕ್ಕೆ ರಾಜು ಬಿರಾದಾರ ಅವರು ನೀಡಿರುವ ಕೊಡುಗೆಯನ್ನು ಸಭೆಯಲ್ಲಿ ಶ್ಲಾಘಿಸಲಾಯಿತು. ಮುಂದಿನ ದಿನಗಳಲ್ಲಿ ಇನ್ನಷ್ಟು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಿ, ಸೈಕ್ಲಿಂಗ್ ಕ್ಷೇತ್ರದಲ್ಲಿ ಉನ್ನತ ಸ್ಥಾನಮಾನಗಳನ್ನು ಗಳಿಸಲಿ ಎಂದು ಬ್ಯಾಂಕ್‌ನ ಸದಸ್ಯರು ಶುಭ ಹಾರೈಸಿದರು.
ಸನ್ಮಾನ ಸ್ವೀಕರಿಸಿದ ರಾಜು ಬಿರಾದಾರ ಅವರು ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕ್‌ನ ಅಧ್ಯಕ್ಷರು, ನಿರ್ದೇಶಕರು ಹಾಗೂ ಎಲ್ಲ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ಅಧ್ಯಕ್ಷ ರವೀಂದ್ರ ಬಿಜ್ಜರಗಿ, ನಿರ್ದೇಶಕರಾದ ಗುರು ಗಚ್ಚಿನಮಠ, ಈರಣ್ಣ ಪಟ್ಟಣಶೆಟ್ಟಿ, ಪ್ರಕಾಶ ಬಗಲಿ, ಹರ್ಷಗೌಡ ಪಾಟೀಲ, ಗುರುರಾಜ ಗಂಗನಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:

error: Content is protected !!