Khanapur

ಧಾರವಾಡ: ಸಚಿವ ಸಂತೋಷ್ ಲಾಡ್‌ಗೆ ಕಾಂಗ್ರೆಸ್ ಮುಖಂಡ ತಮೀಮ್ ತೆರಗಾಂವ್ ಸತ್ಕಾರ!

Share

ಕರ್ನಾಟಕ ಸರ್ಕಾರದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರನ್ನು ಅಳ್ನಾವರ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ತಮೀಮ್ ತೆರಗಾಂವ್ ಭೇಟಿಯಾಗಿ ಆತ್ಮೀಯವಾಗಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಕಲಘಟಗಿ-ಅಳ್ನಾವರ ಮತಕ್ಷೇತ್ರದ ಶಾಸಕರೂ ಆಗಿರುವ ಸಚಿವ ಸಂತೋಷ್ ಎಸ್. ಲಾಡ್ ಅವರನ್ನು ಕಾಂಗ್ರೆಸ್ ಮುಖಂಡ ತಮೀಮ್ ತೆರಗಾಂವ್ ಭೇಟಿಯಾಗಿ ಗೌರವಿಸಿದರು. ತಮೀಮ್ ಅವರ ಸತ್ಕಾರವನ್ನು ಆತ್ಮೀಯವಾಗಿ ಸ್ವೀಕರಿಸಿದ ಸಚಿವರು, ಅಳ್ನಾವರ ಹಾಗೂ ಕಲಘಟಗಿ ಭಾಗದ ಪಕ್ಷ ಸಂಘಟನೆ ಮತ್ತು ಕ್ಷೇತ್ರದ ವಿವಿಧ ಸರ್ವಾಂಗೀಣ ಅಭಿವೃದ್ಧಿ ಕಾರ್ಯಗಳ ಕುರಿತು ಮಾತುಕತೆ ನಡೆಸಿದರು. ಇದೇ ವೇಳೆ ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸುವುದಾಗಿ ಹಾಗೂ ನಾನಾ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ ಜಾರಿಗೆ ತರುವುದಾಗಿ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು.

Tags:

error: Content is protected !!