State

ರಾಜ್ಯದ ಹಲವು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಗಂಭೀರ: ಡಿಸಿಎಂ ಜಿ. ಪರಮೇಶ್ವರ್

Share

ರಾಜ್ಯದಲ್ಲಿ ಕರಾವಳಿ ಮತ್ತು ಮಲೆನಾಡು ಹೊರತುಪಡಿಸಿ ಉಳಿದೆಲ್ಲೆಡೆ ಮಳೆಯಾಗದೆ ಬರ ಪರಿಸ್ಥಿತಿ ತೀವ್ರಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ. ಕುಡಿಯುವ ನೀರಿನ ಅಭಾವ ನೀಗಿಸಲು ಸರ್ಕಾರ ಹಲವು ಪರ್ಯಾಯ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಬರುವ ಅಧಿವೇಶನದಲ್ಲಿಯೂ ಈ ಬಗ್ಗೆ ಕೂಲಂಕಷವಾಗಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಬರ ಪರಿಸ್ಥಿತಿಯ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಾ. ಜಿ. ಪರಮೇಶ್ವರ್, ರಾಜ್ಯವನ್ನು ಮೂರು ವಿಭಾಗಗಳನ್ನಾಗಿ ಮಾಡಿ ಜಿಲ್ಲೆಗಳಲ್ಲಿ ಬರ ಸ್ಥಿತಿಗತಿಯನ್ನು ಅವಲೋಕಿಸಲಾಗಿದೆ. ಸಹ್ಯಾದ್ರಿ ಬೆಟ್ಟಗಳಲ್ಲಿ ಮಳೆಯಾದ ಕಾರಣಕ್ಕೆ ಕೆಲ ಜಲಾಶಯಗಳಿಗೆ ನೀರು ಬಂದಿದೆಯೇ ಹೊರತು, ರಾಜ್ಯದ ಹಲವು ತಾಲೂಕುಗಳಲ್ಲಿ ಮಳೆಯಾಗದೆ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿಗಳು ತುರ್ತು ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದರು.

ಇದೇ ವೇಳೆ ನೈಸ್ ರಸ್ತೆ ವಿಚಾರವಾಗಿ ಪ್ರತಿಕ್ರಿಯಿಸಿ, ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಹೊಸದೇನಲ್ಲ, ಈ ಸಮಸ್ಯೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ 7-8 ಸಭೆಗಳನ್ನು ನಡೆಸಲಾಗಿದ್ದು, ರೈತರ ಸಮಸ್ಯೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಯನ್ನು ಪರಿಶೀಲಿಸಲು ಮೂರು ಭಾಗಗಳನ್ನು ಮಾಡಲಾಗಿದೆ. 23 ಸಾವಿರ ಎಕರೆ ಭೂಮಿಯಲ್ಲಿ ಎಷ್ಟು ದುರುಪಯೋಗವಾಗಿದೆ ಎಂಬುದನ್ನು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು. ಇನ್ನು ಬಿಡದಿ ಯೋಜನೆಯ ಕುರಿತು ಪ್ರತಿಭಟಿಸಲು ವಿಪಕ್ಷಗಳಿಗೆ ಸಂಪೂರ್ಣ ಹಕ್ಕಿದ್ದು, ಈ ಬಗ್ಗೆ ಸಿಎಂ ಈಗಾಗಲೇ ಪ್ರಕಟಣೆ ಹೊರಡಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

Tags:

error: Content is protected !!