ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಸಮರ್ಕವಾಗಿ ನೀಡದಿರುವ ಅಧಿಕಾರಿಗಳ ನಡೆ ಖಂಡಿಸಿ ಹಾಗೂ ಮೂಲಭೂತ ಸೌಕರ್ಯಗಳ ಒದಗಿಸಲು ಆಗ್ರಹಿಸಿ, ಧಾರವಾಡದಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು ರಾಜ್ಯ ಸರ್ಕಾರ ಸೇರಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು ರಾಜ್ಯ ಸರ್ಕಾರ ಹಾಗೂ ಸಮಜಾ ಕಲ್ಯಾಣ ಇಲಾಖೆಯ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿಲ್ಲ. ಸುಸಜ್ಜಿತ ಗ್ರಂಥಾಲಯ, ಶೌಚಾಲಯ ಸೇರಿದಂತೆ ಇತರ ಮೂಲಭೂತ ಸೌಕರ್ಯಗಳಿಲ್ಲ. ಈ ರೀತಿ ವಸತಿ ನಿಲಯದಲ್ಲಿ ಅವ್ಯವಸ್ಥೆ ಉಂಟು ಮಾಡಿದ ನಿಲಯ ಪಾಲಕರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು, ಸಮರ್ಪಕ ಮೂಲಭೂತ ಸೌಕರ್ಯಗಳ ಒದಗಿಸಬೇಕು ಎಂದು ಆಗ್ರಹಿಸಿದರು.
