Dharwad

ಧಾರವಾಡದಲ್ಲಿ ನಟ ಪ್ರಕಾಶ ರಾಜ್‌ಗೆ ಗೋ ಬ್ಯಾಕ್ ಘೋಷಣೆ…. ಧಾರವಾಡ ವಿದ್ಯಾವರ್ಧಕ ಸಂಘದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ನಟ ಪ್ರಕಾಶ ರಾಜ್ ಭಾಗಿ

Share

ಧಾರವಾಡ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಆಯೋಜಿಸಿರುವ ಸಮುದಾಯ ಧಾರವಾಡ ಸಂಘಟನೆಯ ಸಮಾರೋಪ ಕಾರ್ಯಕ್ರಮಕ್ಕೆ ನಟ ಪ್ರಕಾಶ್ ರಾಜ್ ಮುಖ್ಯ ಅತಿಥಿಯಾಗಿ ಭಾಗವಹಿಸಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಭಕ್ತ ಬಳಗ ಹಾಗೂ ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಎದುರು ಜಮಾಯಿಸಿದ ಪ್ರತಿಭಟನಾಕಾರರು ನಟ ಪ್ರಕಾಶ್ ರಾಜ್ ವಿರುದ್ಧ ‘ಗೋ ಬ್ಯಾಕ್ ಪ್ರಕಾಶ್ ರಾಜ್’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ ಅವರು, ಪ್ರಕಾಶ್‌ ರಾಜ್ ಅವರಿಗೆ ಧಾರವಾಡ ಪ್ರವೇಶ ನೀಡಬಾರದು ಎಂದು ಆಗ್ರಹಿಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು. ನಟ ಪ್ರಕಾಶ್ ರಾಜ್ ಅವರ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿರುವ ಧರ್ಮಸ್ಥಳ ಭಕ್ತ ಬಳಗ ಹಾಗೂ ಬಿಜೆಪಿ ಮುಖಂಡರು, ಧಾರ್ಮಿಕ ಕ್ಷೇತ್ರಗಳ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

Tags:

error: Content is protected !!