ಧಾರವಾಡದ ಯೋಗೀಶ್ಗೌಡ ಗೌಡರ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ, ಹೈಕೋರ್ಟ್ನಿಂದ ರಿಲೀಫ್ ಪಡೆದುಕೊಂಡಿರುವ ಶಾಸಕ ವಿನಯ್ ಕುಲಕರ್ಣಿಗೆ ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದಲೂ ಬಿಗ್ ರಿಲೀಫ್ ಸಿಕ್ಕಿದೆ.

ವಿನಯ್ ಕುಲಕರ್ಣಿಗೆ ವಿಧಿಸಲಾಗಿದ್ದ ಧಾರವಾಡ ಜಿಲ್ಲಾ ಪ್ರಬಂಧ ನಿರ್ಬಂಧದಲ್ಲಿ ಸಡಿಲಿಕೆ ಮಾಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಅವರು ಧಾರವಾಡ ಜಿಲ್ಲೆಗೆ ಪ್ರವೇಶ ಮಾಡಲು ಅನುಮತಿ ನೀಡಿದೆ. ಸಾಕ್ಷಿ ನಾಶ ಆರೋಪದಡಿ ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಈಗ ಈ ನಿರ್ಬಂಧದಲ್ಲಿ ಸಡಿಲಿಕೆ ಮಾಡಲಾಗಿದೆ. ಕೊಲೆ ಪ್ರಕರಣದ ತೀರ್ಪಿಗೆ ತಡೆಯಾಜ್ಞೆ ಸಿಕ್ಕಿದ್ದರಿಂದ ವಿನಯ್ ಅವರು ಧಾರವಾಡಕ್ಕೆ ಪ್ರವೇಶ ಪಡೆಯಬಹುದಾಗಿತ್ತು. ಆದರೆ, ಸಾಕ್ಷಿ ನಾಶ ಪ್ರಕರಣದಲ್ಲಿ ನೀಡಲಾಗಿದ್ದ ಧಾರವಾಡ ಜಿಲ್ಲಾ ಪ್ರವೇಶ ನಿರ್ಬಂಧದಲ್ಲಿ ಸಡಿಲಿಕೆಯಾಗಿರಲಿಲ್ಲ. ಅದರಲ್ಲೂ ಸಡಿಲಿಕೆ ಮಾಡಲು ವಿನಯ್ ಕುಲಕರ್ಣಿ ನ್ಯಾಯಾಲಯದ ಮೊರೆ ಹೋಗಿದ್ದರು.
ಈಗ ಅದინೆಯಲ್ಲೂ ಸಡಿಲಿಕೆ ಸಿಕ್ಕಿರುವುದರಿಂದ ವಿನಯ್ ಕುಲಕರ್ಣಿ ಧಾರವಾಡಕ್ಕೆ ಪ್ರವೇಶ ಮಾಡಬಹುದಾಗಿದೆ. ಆದರೆ, ಜಿಲ್ಲೆಗೆ ಪ್ರವೇಶಿಸುವಾಗ ಯಾವುದೇ ಮೆರವಣಿಗೆ ಹಾಗೂ ಇತ್ಯಾದಿ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ ಎಂದು ಕೋರ್ಟ್ ಕಟ್ಟುನಿಟ್ಟಾಗಿ ತಿಳಿಸಿದೆ.
