Ballari

ಬಳ್ಳಾರಿಯ ಮೋತಿ ವೃತ್ತದಲ್ಲಿ 150 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಧ್ವಜಾರೋಹಣ

Share

ಬಳ್ಳಾರಿಯ ಪ್ರಸಿದ್ಧ ಮೋತಿ ವೃತ್ತದಲ್ಲಿ 150 ಅಡಿ ಎತ್ತರದ ಬೃಹತ್ ಧ್ವಜಸ್ತಂಭದಲ್ಲಿ ಸಚಿವ ನಾಗೇಂದ್ರ ಅವರು 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಧ್ವಜಕ್ಕೆ ಅತ್ಯಂತ ಗೌರವಪೂರ್ವಕವಾಗಿ ವಂದನೆ ಸಲ್ಲಿಸಲಾಯಿತು.

ಬಳ್ಳಾರಿ ನಗರದ ಮೋತಿ ವೃತ್ತದಲ್ಲಿ ಆಯೋಜಿಸಲಾಗಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಚಿವ ನಾಗೇಂದ್ರ ಅವರು 150 ಅಡಿ ಎತ್ತರದ ರಾಷ್ಟ್ರಧ್ವಜವನ್ನು ಹಾರಿಸಿ ಗೌರವ ಸಮರ್ಪಣೆ ಮಾಡಿದರು. ಜಿಲ್ಲಾಡಳಿತ ಆಯೋಜಿಸಿದ್ದ ಈ ಅಭೂತಪೂರ್ವ ಸಮಾರಂಭದಲ್ಲಿ ಶಾಸಕ ಭರತ್ ರೆಡ್ಡಿ, ಮೇಯರ್ ಗಾದೆಪ್ಪ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸುಮನ್ ಡಿ. ಪನ್ನೇಕರ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸ್ಥಳದಲ್ಲಿ ಸಾವಿರಾರು ಸಾರ್ವಜನಿಕರು ಭಾಗವಹಿಸಿ ದೇಶಭಕ್ತಿ ಮೆರೆದರು.

Tags:

error: Content is protected !!