80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಜಯಪುರ ನಗರದಲ್ಲಿ ಬಿಜೆಪಿ ನೇತೃತ್ವದಲ್ಲಿ ಅದ್ದೂರಿ ತ್ರಿವರ್ಣ ಧ್ವಜ ಯಾತ್ರೆ ನಡೆಯಿತು. 300 ಮೀಟರ್ ಉದ್ದದ ಬೃಹತ್ ತ್ರಿವರ್ಣ ಧ್ವಜದೊಂದಿಗೆ ನೂರಾರು ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದರು. ದೇಶಭಕ್ತಿ ಘೋಷಣೆಗಳು ಮೊಳಗಿದವು. ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ತ್ರಿವರ್ಣ ಧ್ವಜ ಯಾತ್ರೆ ಗಾಂಧಿ ಚೌಕ, ಬಸವೇಶ್ವರ ವೃತ್ತ, ಕನಕದಾಸ ವೃತ್ತ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ಸಾಗಿತು.

ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ದೇಶಭಕ್ತಿಯ ಘೋಷಣೆಗಳೊಂದಿಗೆ ಸಾಗಿದ ಮೆರವಣಿಗೆ ಸಾರ್ವಜನಿಕರ ಗಮನ ಸೆಳೆಯಿತು.
300 ಮೀಟರ್ ಉದ್ದದ ಬೃಹತ್ ತ್ರಿವರ್ಣ ಧ್ವಜ ಯಾತ್ರೆಯ ಪ್ರಮುಖ ಆಕರ್ಷಣೆಯಾಗಿತ್ತು. ನಗರದ ಪ್ರಮುಖ ರಸ್ತೆಗಳಲ್ಲಿ ತ್ರಿವರ್ಣ ಧ್ವಜಗಳು ರಾರಾಜಿಸಿದವು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತಾ ದೇಶದ ಏಕತೆ ಮತ್ತು ಸಮಗ್ರತೆಯ ಸಂದೇಶ ಸಾರುವ ಉದ್ದೇಶದಿಂದ ಯಾತ್ರೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಉತ್ಸಾಹದಿಂದ ಪಾಲ್ಗೊಂಡು ರಾಷ್ಟ್ರಭಕ್ತಿಯ ಭಾವನೆ ಮೆರೆದರು.
