ಶಾಸಕ ಅಬ್ಬಯ್ಯಗೆ ತಪ್ಪಿದ ಸಚಿವ ಸ್ಥಾನ
ಹಳೇಹುಬ್ಬಳ್ಳಿಯಲ್ಲಿ ಕರವೇ-ಬೆಂಬಲಿಗರ ಉಗ್ರ ಪ್ರತಿಭಟನೆ
ರಸ್ತೆಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ
ಕೆಎಸ್ಆರ್ಟಿಸಿ ಬಸ್ಗೆ ಕಲ್ಲು ತೂರಾಟ: ಉದ್ವಿಗ್ನ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಸೋಮವಾರ ಹಳೇಹುಬ್ಬಳ್ಳಿಯ ಇಂಡಿಪಂಪ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಟೈರ್ಗೆ ಬೆಂಕಿ ಹಚ್ಚಿ ಸರ್ಕಾರ ಹಾಗೂ ಪಕ್ಷದ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ವೇಳೆ ಸಾರಿಗೆ ಸಂಸ್ಥೆಯ ಬಸ್ಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಘಟನೆ ಸಂಬಂಧ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
