Bagalkote

ಇಳಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿಯಾಗಿ ನಜ್ಜುಗುಜ್ಜಾದ ಕಾರು; ಅದೃಷ್ಟವಶಾತ್ ತಪ್ಪಿದ ಪ್ರಾಣಾಪಾಯ!

Share

ಬಾಗಲಕೋಟೆ ಜಿಲ್ಲೆಯ ಇಳಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟೈರ್ ಬ್ಲಾಸ್ಟ್ ಆದ ಕಾರಣ ನಿಯಂತ್ರಣ ತಪ್ಪಿದ ಲಾರಿಯೊಂದು ಸರ್ವಿಸ್ ರಸ್ತೆಯಲ್ಲಿದ್ದ ಕಾರಿನ ಮೇಲೆ ಪಲ್ಟಿಯಾಗಿದೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ ರಾಷ್ಟ್ರೀಯ ಹೆದ್ದಾರಿಯ ನವಗ್ರಹ ढाಬಾ ಹತ್ತಿರದ ಸರ್ವಿಸ್ ರಸ್ತೆಯಲ್ಲಿ ಹುನಗುಂದದಿಂದ ಕುಷ್ಟಗಿ ಮಾರ್ಗವಾಗಿ ಹೊರಟಿದ್ದ ಗುಜರಾತ್ ಮೂಲದ ಲಾರಿಯ ಟೈರ್ ಹಠಾತ್ ಬ್ಲಾಸ್ಟ್ ಆದ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿದ ಲಾರಿ ಸರ್ವಿಸ್ ರಸ್ತೆಯಲ್ಲಿದ್ದ ಕೊಪ್ಪಳ ಜಿಲ್ಲೆಯ ಹನುಮಸಾಗರ ಪಟ್ಟಣದ ಕಾರಿನ ಮೇಲೆ ಉರುಳಿ ಬಿದ್ದು ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ವಾಹನಗಳಿಂದ ಡೀಸೆಲ್ ಸೋರಿಕೆಯಾಗಿದ್ದು ಆತಂಕ ಸೃಷ್ಟಿಸಿತ್ತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಗ್ನಿ ಅವಘಡಗಳು ನಡೆಯದಂತೆ ಎಚ್ಚರಿಕೆ ವಹಿಸಿ, ಕ್ರೇನ್ ಸಹಾಯದಿಂದ ಅಪಘಾತಕ್ಕೀಡಾದ ವಾಹನಗಳನ್ನು ಹೊರತೆಗೆದಿದ್ದಾರೆ. ಇಳಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:

error: Content is protected !!