Vijaypura

ವಿಜಯಪುರದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ; ಡಿಜೆ ಸದ್ದಿಗೆ ಹೆಜ್ಜೆ ಹಾಕಿದ ಯುವಕರು; ರಾರಾಜಿಸಿದ ಇಸ್ಲಾಂ ಧರ್ಮದ ಧ್ವಜಗಳು

Share

ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಐತಿಹಾಸಿಕ ವಿಜಯಪುರ ನಗರದಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಿದರು. ಈದ್ ಮಿಲಾದ್ ಪ್ರಯುಕ್ತ ನಗರದ ಪ್ರಮುಖ ಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು. ಡಿಜೆ ಸದ್ದಿಗೆ ಯುವಕರು ಹೆಜ್ಜೆ ಹಾಕಿದರೆ, ಮೆರವಣಿಗೆಯಲ್ಲಿ ಇಸ್ಲಾಂ ಧರ್ಮದ ಧ್ವಜಗಳು ರಾರಾಜಿಸಿದವು.

ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಅದ್ಧೂರಿ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಡಿಜೆ ಸದ್ದಿನೊಂದಿಗೆ ಸಾಗಿದ ಮೆರವಣಿಗೆಯಲ್ಲಿ ಯುವಕರು ಸಂಭ್ರಮದಿಂದ ಹೆಜ್ಜೆ ಹಾಕಿದರು. ಮೆರವಣಿಗೆಯುದ್ದಕ್ಕೂ ಇಸ್ಲಾಂ ಧರ್ಮದ ಧ್ವಜಗಳು ಗಮನ ಸೆಳೆದವು. ಪೈಗಂಬರ್ ಮುಹಮ್ಮದ್ ಅವರ ಸಂದೇಶಗಳನ್ನು ಸ್ಮರಿಸುತ್ತಾ, ಘೋಷಣೆಗಳನ್ನು ಕೂಗಿದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಈ ವೇಳೆ ವಿವಿಧ ಸಂಘ-ಸಂಸ್ಥೆಗಳು ಹಾಗೂ ಯುವಕರ ಗುಂಪುಗಳು ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ತಂಪು ಪಾನೀಯ ವಿತರಿಸುವ ಮೂಲಕ ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು.

Tags:

error: Content is protected !!