KHANAPUR

ಗರ್ಲಗುಂಜಿ ವಿಭಾಗೀಯ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ನೀಡಿದ ಶಾಸಕ ವಿಠ್ಠಲ ಹಲಗೇಕರ

Share

ಲೋಕೋಳಿಯ ಜ್ಞಾನೇಶ್ವರ ವಿದ್ಯಾಲಯದಲ್ಲಿ ಗರ್ಲಗುಂಜಿ ವಿಭಾಗೀಯ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಶಾಸಕ ವಿಠ್ಠಲ ಹಲಗೇಕರ ಅವರು ಕ್ರೀಡಾಪಟುಗಳನ್ನು ಹುರಿದುಂಬಿಸಿದ್ದು, ಏಳು ಪ್ರೌಢಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದಾರೆ.

ಖಾನಾಪೂರ ತಾಲೂಕಿನ ಲೋಕೋಳಿ ಗ್ರಾಮದ ಜ್ಞಾನೇಶ್ವರ ವಿದ್ಯಾಲಯದಲ್ಲಿ ಆಯೋಜಿಸಲಾದ ಗರ್ಲಗುಂಜಿ ವಿಭಾಗೀಯ ಕ್ರೀಡಾ ಸ್ಪರ್ಧೆಗಳು 2026–27ರ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ವಿಠ್ಠಲ ಹಲಗೇಕರ ಅವರು ಪಾಲ್ಗೊಂಡು ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕ್ರೀಡಾಪಟುಗಳಿಗೆ ಉತ್ತೇಜನ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಖಾನಾಪೂರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಅಮೃತ ಶೇಲಾರ ಸೇರಿದಂತೆ ವಿಭಾಗದ ಏಳು ಪ್ರೌಢಶಾಲೆಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Tags:

error: Content is protected !!