KHANAPUR

ಬರಗಾಂವ: ಶಾಲಾ ಆವರಣ ಹಾಗೂ ಚರಂಡಿ ಸ್ವಚ್ಛತೆಗೆ ಒತ್ತಾಯಿಸಿ ಪಿಡಿಒಗೆ ಮನವಿ; ಉಗ್ರ ಹೋರಾಟದ ಎಚ್ಚರಿಕೆ!

Share

ಖಾನಾಪುರ ತಾಲೂಕಿನ ಬರಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಾಥಮಿಕ ಮರಾಠಿ ಶಾಲೆಯ ಆವರಣ ಹಾಗೂ ಚರಂಡಿಗಳನ್ನು ತಕ್ಷಣವೇ ಸ್ವಚ್ಛಗೊಳಿಸುವಂತೆ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ಪಾಟೀಲ ನೇತೃತ್ವದಲ್ಲಿ ಪಿಡಿಒ ಅವರಿಗೆ ಮನವಿ ಸಲ್ಲಿಸಲಾಯಿತು. ಬರುವ ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆಯ ಮುನ್ನ ಸ್ವಚ್ಛತೆ ಕೈಗೊಳ್ಳದಿದ್ದರೆ ಮೇಲಧಿಕಾರಿಗಳಿಗೆ ದೂರು ನೀಡುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಖಾನಾಪುರ ತಾಲೂಕಿನ ಬರಗಾಂವ ಗ್ರಾಮದಲ್ಲಿ ರಾಷ್ಟ್ರೀಯ ಹಬ್ಬವಾದ ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಹಾಗೂ ಉತ್ಸಾಹದಿಂದ ಆಚರಿಸಲು ಗ್ರಾಮಸ್ಥರು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ, ಸ್ಥಳೀಯ ಸರ್ಕಾರಿ ಪ್ರಾಥಮಿಕ ಮರಾಠಿ ಶಾಲೆಯ ಆವರಣದಲ್ಲಿ ಹಾಗೂ ಸುತ್ತಮುತ್ತಲಿನ ಚರಂಡಿಗಳಲ್ಲಿ ಅಸ್ವಸ್ಥತೆ ಹೆಚ್ಚಾಗಿದ್ದು, ಆವರಣ ಸಂಪೂರ್ಣವಾಗಿ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಶಾಲಾ ಆವರಣ ಹಾಗೂ ಗ್ರಾಮದ ಚರಂಡಿಗಳನ್ನು ತಕ್ಷಣವೇ ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ಪಾಟೀಲ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲಾಯಿತು. ಪಿಡಿಒ ಅವರ ಅನುಪಸ್ಥಿತಿಯಲ್ಲಿ ಪಂಚಾಯಿತಿಯ ಕ್ಲಾರ್ಕ್ ಅವರಿಗೆ ಈ ಮನವಿ ಪತ್ರವನ್ನು ಹಸ್ತಾಂತರಿಸಿದ ಮುಖಂಡರು, ಒಂದು ವೇಳೆ ಸ್ವಚ್ಛತಾ ಕಾರ್ಯ ಕೈಗೊಳ್ಳದಿದ್ದರೆ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ನೇರವಾಗಿ ದೂರು ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮಹಾಂತೇಶ ಪಾಟೀಲ, ಮಹೇಶ್ ಪಾಟೀಲ, ಕಿರಣ್ ಪಾಟೀಲ, ತಾನಾಜಿ ಪಾಟೀಲ, ರಾಹುಲ್ ಧಾಮನೇಕರ, ಸಿದ್ದು ದಳವಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Tags:

error: Content is protected !!