ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಹಾಗೂ ಮಾಜಿ ರಾಜ್ಯಪಾಲ ಡಾ. ಡಿ.ವೈ. ಪಾಟೀಲ್ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಅವರ ಕೊಲ್ಹಾಪೂರದ ನಿವಾಸಕ್ಕೆ ಭೇಟಿ ನೀಡಿರುವ ನಾಯಕರು ಅಂತಿಮ ನಮನ ಸಲ್ಲಿಸುತ್ತಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಮಹಾರಾಷ್ಟ್ರದ ಹಿರಿಯ ನಾಯಕ, ಮಾಜಿ ರಾಜ್ಯಪಾಲ ಮತ್ತು ಪದ್ಮಶ್ರೀ ಪುರಸ್ಕೃತ ಡಾ. ಡಿ.ವೈ. ಪಾಟೀಲ್ ಅವರ ನಿಧನದ ಹಿನ್ನೆಲೆಯಲ್ಲಿ, ಮಾಜಿ ಸತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೋಲಾಪುರದ ನಿವಾಸಕ್ಕೆ ಭೇಟಿ ನೀಡಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಅವರ ಹಿರಿಯ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸತೇಜ್ ಪಾಟೀಲ್ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿದ ಅವರು, ಡಾ. ಡಿ.ವೈ. ಪಾಟೀಲ್ ಅವರ ಸರಳತೆ, ಸಜ್ಜನಿಕೆ ಹಾಗೂ ಶಿಕ್ಷಣ ಮತ್ತು ಸಮಾಜ ಸೇವೆಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಎಂದೆಂದಿಗೂ ಸ್ಮರಣೀಯ ಎಂದರು. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಅವರ ಶೈಕ್ಷಣಿಕ ಕಾರ್ಯಗಳು ಮುಂದಿನ ಪೀಳಿಗೆಗೆ ಸದಾ ಸ್ಪೂರ್ತಿದಾಯಕವಾಗಿರಲಿದೆ ಎಂದು ತಿಳಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿದರು.
