Banglore

ಲಕ್ಷ್ಮೀ ಹೆಬ್ಬಾಳ್ಕರ್ ಸಚಿವಗಿರಿ ಮಿಸ್‌!!!

Share

ನೂತನ ಸಚಿವ ಸಂಪುಟದಲ್ಲಿ ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನಲ್ಲಿ ಬೆಂಬಲಿಗರ ಆಕ್ರೋಶ ಮುಗಿಲು ಮುಟ್ಟಿದೆ. ರಸ್ತೆಗಿಳಿದು ಬೊಬ್ಬೆ ಹೊಡೆದು ಪ್ರತಿಭಟಿಸಿದ ಅಭಿಮಾನಿಗಳನ್ನು ಪೊಲೀಸರು ವಿರೋಧಿಸಿ ವಶಕ್ಕೆ ಪಡೆದಿದ್ದು, ಹೈಕಮಾಂಡ್ ನಿರ್ಧಾರದ ವಿರುದ್ಧ ಬೆಂಬಲಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೂತನ ಸಚಿವ ಸಂಪುಟದಲ್ಲಿ ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನಲ್ಲಿ ಬೆಂಬಲಿಗರ ಆಕ್ರೋಶ ಮುಗಿಲು ಮುಟ್ಟಿದೆ. ರಸ್ತೆಗಿಳಿದು ಬೊಬ್ಬೆ ಹೊಡೆದು ಪ್ರತಿಭಟಿಸಿದ ಅಭಿಮಾನಿಗಳನ್ನು ಪೊಲೀಸರು ವಿರೋಧಿಸಿ ವಶಕ್ಕೆ ಪಡೆದಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಮತ್ತೆ ಸಚಿವ ಸಂಪುಟ ಕಸರತ್ತು ಕಾವೇರಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗದೇ ಇದ್ದದ್ದು ಅವರ ಬೆಂಬಲಿಗರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದು ಬಸ್‌ನಲ್ಲಿ ಕರೆದೊಯ್ದಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಾಯಕರೊಬ್ಬರು, “ಈ ಹಿಂದೆ ದೆಹಲಿ ಮಟ್ಟದಲ್ಲೂ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಮಾತುಕತೆ ನಡೆಸಲಾಗಿತ್ತು. ಈಗ ಮತ್ತೊಮ್ಮೆ ಹೈಕಮಾಂಡ್‌ ಹಾಗೂ ಮುಖ್ಯಮಂತ್ರಿಗಳಿಗೆ ನೇರವಾಗಿ ಮನವಿ ಸಲ್ಲಿಸಲು ಅಂತಿಮ ಪ್ರಯತ್ನ ನಡೆಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

Tags:

error: Content is protected !!