hubbali

ಪುಷ್ಕರಣಿಗಾಗಿ ಬೃಹತ್ ಹೋರಾಟ – ನೂರಾರು ಜನ ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದ ಖಾಕಿ

Share

ವಾಣಿಜ್ಯನಗರಿ ಹುಬ್ಬಳ್ಳಿಯ ಭವಾನಿಶಂಕರ ದೇವಸ್ಥಾನದ ಉಳಿವಿಗಾಗಿ ಕರೆ ಕೊಟ್ಟಿದ್ದ ಹೋರಾಟಕ್ಕೆ ಹುಬ್ಬಳ್ಳಿಯಲ್ಲಿ ಬಹುದೊಡ್ಡ ಚಾಲನೆ ದೊರೆತಿದ್ದು, “ನಾವೆಲ್ಲಾ ಹಿಂದೂ, ನಾವೆಲ್ಲ ಒಂದೇ” ಎನ್ನುವ ಘೋಷಣೆಯೊಂದಿಗೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಬ್ಯಾರಿಕೇಡ್‌ ತೆರವು ಮಾಡಿ ಒಳನುಗ್ಗಲು ಯತ್ನಿಸಿದ ಪ್ರತಿಭಟನಾನಿರತ ನೂರಾರು ಜನ ಹಿಂದೂಪರ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾಸಕ ಅರವಿಂದ ಬೆಲ್ಲದ, ಪ್ರದೀಪ್ ಶೆಟ್ಟರ್, ಶಾಸಕ ಮಹೇಶ ಟೆಂಗಿನಕಾಯಿ, ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ಹಾಗೂ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಇದೇ ವೇಳೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸರು ಪ್ರತಿಭಟನೆಗೆ ತಡೆಯೊಡ್ಡಿ ನೂರಾರು ಜನ ಹಿಂದೂಪರ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸ್ಥಳಾಂತರ ಮಾಡಿದ್ದಾರೆ.

ಆಸಾರಹೊಂಡದ ರಸ್ತೆಯಲ್ಲಿಯೇ ಚನ್ನಪೇಟೆಯಲ್ಲಿ ಪುಷ್ಕರಣಿ ಸಂರಕ್ಷಣಾ ಸಮಿತಿಯು ಪ್ರತಿಭಟನೆ ನಡೆಸಿದ್ದು, ಭಜನೆಯ ಮಾದರಿಯಲ್ಲಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಏಕಾಏಕಿ ಬ್ಯಾರಿಕೇಡ್ ತಳ್ಳಿ ಒಳನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

Tags:

error: Content is protected !!