ಖಾನಾಪೂರದಲ್ಲಿ ಭಾರತೀಯ ಜನತಾ ಪಕ್ಷದ ಎಲ್ಲಾ ಕಾರ್ಯಕರ್ತರೊಂದಿಗೆ ಮಹತ್ವದ ಸಭೆ ಹಾಗೂ ಸಮಾವೇಶವನ್ನು ಶಾಸಕ ವಿಠ್ಠಲ ಹಲಗೇಕರ ಅವರು ನಡೆಸಿದರು


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಠ್ಠಲ ಹಲಗೇಕರ ಅವರು ಸಭೆಯಲ್ಲಿ ಮುಂಬರುವ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವುದು ಹೇಗೆ, ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವುದು ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ಕುರಿತು ಸವಿಸ್ತಾರವಾಗಿ ಹಾಗೂ ಸಕಾರಾತ್ಮಕವಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಖಾನಾಪೂರ ತಾಲೂಕಿನ ಉತ್ಸಾಹಿ ಕಾರ್ಯಕರ್ತರು ಹಾಗೂ ಭಾರತೀಯ ಜನತಾ ಪಕ್ಷದ ಎಲ್ಲಾ ಗೌರವಾನ್ವಿತ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ
