Vijaypura

ಮಂಡಲ್ ವರದಿ ಜಾರಿ ದಿನವನ್ನು ಸಾಮಾಜಿಕ ನ್ಯಾಯ ದಿನವಾಗಿ ಆಚರಣೆ

Share

ಮಂಡಲ್ ವರದಿ ಜಾರಿ ದಿನವನ್ನು ಸಾಮಾಜಿಕ ನ್ಯಾಯ ದಿನವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ, ಭಾರತದಲ್ಲಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.27ರಷ್ಟು ಮೀಸಲಾತಿ ನೀಡುವ ಮೂಲಕ ಮಂಡಲ್ ವರದಿಯನ್ನು ಜಾರಿಗೆ ತಂದ ಮಾಜಿ ಪ್ರಧಾನಿ ವಿ.ಪಿ. ಸಿಂಗ್ ಅವರ ಕೊಡುಗೆ ಅತ್ಯಂತ ಐತಿಹಾಸಿಕ ಹಾಗೂ ಕ್ರಾಂತಿಕಾರಿಯಾಗಿದೆ ಎಂದು ಹೇಳಿದರು.

ಹಿಂದುಳಿದ ವರ್ಗಗಳಿಗೆ ಶೇ.27ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಅವರು ದೇಶದ ರಾಜಕಾರಣ ಹಾಗೂ ಸಾಮಾಜಿಕ ನ್ಯಾಯ ವ್ಯವಸ್ಥೆಯ ದಿಕ್ಕನ್ನೇ ಬದಲಾಯಿಸಿದರು. ಪ್ರತಿವರ್ಷ ಆಗಸ್ಟ್ 7ರಂದು ಈ ದಿನವನ್ನು ಮಂಡಲ್ ವರದಿ ಜಾರಿ ದಿನವಾಗಿ ಆಚರಿಸುವ ಮೂಲಕ ಮಂಡಲ್ ವರದಿ ಜಾರಿಗಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸಬೇಕು. ಅಲ್ಲದೆ, ಹಿಂದುಳಿದ ವರ್ಗಗಳ ಫಲಾನುಭವಿಗಳು ಹಾಗೂ ವಿದ್ಯಾರ್ಥಿಗಳು ಅವರ ತ್ಯಾಗ ಮತ್ತು ಕೊಡುಗೆಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ಹಿಂದುಳಿದ ವರ್ಗಗಳ ಮುಖಂಡರಾದ ಭಾರತೀಯ ನಾವಿ ಸಮಾಜದ ಮಲ್ಲು ಬಿದರಿ, ರಮೇಶ್ ಬಡಿಗೇರ ಹಾಗೂ ಸಿದ್ದು ಬಾವಿಕಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇನ್ನೋರ್ವ ಹಿಂದುಳಿದ ವರ್ಗಗಳ ಮುಖಂಡ ಮಲ್ಲು ಬಿದರಿ ಮಾತನಾಡಿ, 1979ರ ಜನವರಿ 1ರಂದು ಅಂದಿನ ಪ್ರಧಾನಿ ಮುರಾರ್ಜಿ ದೇಸಾಯಿ ಅವರ ನೇತೃತ್ವದಲ್ಲಿ ಮಂಡಲ್ ಆಯೋಗ ರಚನೆಯಾಯಿತು. ಆಯೋಗವು 1980ರಲ್ಲಿ ತನ್ನ ವರದಿ ಸಲ್ಲಿಸಿತು. ನಂತರ 1990ರಲ್ಲಿ ದೇಶದಲ್ಲಿ ಶೇ.52ರಷ್ಟು ಜನಸಂಖ್ಯೆ ಹೊಂದಿದ್ದ ಹಿಂದುಳಿದ ವರ್ಗಗಳಿಗೆ ಶೇ.27ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳಲಾಯಿತು.
ಮಂಡಲ್ ವರದಿ ಜಾರಿ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದರೂ, ಅಂತಿಮವಾಗಿ ಸುಪ್ರೀಂ ಕೋರ್ಟ್ ಕೂಡ ಈ ವರದಿಯನ್ನು ಎತ್ತಿಹಿಡಿಯಿತು. ಇಂದಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಾಮಾಜಿಕ ನ್ಯಾಯದ ಪರ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳು ಯಾರು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

Tags:

error: Content is protected !!