ವಾಣಿಜ್ಯನಗರಿ ಹುಬ್ಬಳ್ಳಿಯ ಭವಾನಿ ಶಂಕರ ದೇವಾಲಯದ ಪುಷ್ಕರಣಿ ವಿವಾದದ ವಿಚಾರ ಸಾಕಷ್ಟು ಮುನ್ನೆಲೆಗೆ ಬಂದಿದ್ದು, ಶನಿವಾರ ಪುಷ್ಕರಣಿ ಸಂರಕ್ಷಣಾ ಸಮಿತಿ ಹೋರಾಟ ನಡೆಸಿದ ಬೆನ್ನಲ್ಲೇ ಇದೀಗ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪಾಲಿಕೆ ಬಿಜೆಪಿ ಸದಸ್ಯರು ಸಾಥ್ ನೀಡಿದ್ದಾರೆ.

ಹುಬ್ಬಳ್ಳಿಯ ಅಸಾರ್ ಓಣಿಯಲ್ಲಿರುವ ಭವಾನಿ ಶಂಕರ ದೇವಸ್ಥಾನದ ಮುಂಭಾಗದಲ್ಲಿನ ಪುಷ್ಕರಣಿ ಮೇಲೆ ನಿರ್ಮಾಣವಾಗಿರುವ ರಸ್ತೆಯನ್ನು ಕೂಡಲೇ ತೆರವು ಮಾಡಬೇಕು. ಅಲ್ಲದೆ, ಪುಷ್ಕರಣಿಯನ್ನು ಉತ್ಪನನ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
