Kittur

ಜ್ಯುವೆಲ್ಲರಿ ಶೋರೂಂ ಕಳ್ಳತನ ಭೇದಿಸಿದ ಪೊಲೀಸರು, ಐವರು ಅಂತರರಾಜ್ಯ ಖದೀಮರ ಬಂಧನ

Share

ಜ್ಯುವೆಲ್ಲರಿ ಅಂಗಡಿ ಕಳ್ಳತನ ಪ್ರಕರಣ ಭೇದಿಸಿದ ಕಿತ್ತೂರು ಪೊಲೀಸರು, ರಾಜಸ್ಥಾನ ಮೂಲದ ನಾಲ್ವರು ಹಾಗೂ ಮಧ್ಯಪ್ರದೇಶ ಮೂಲದ ಓರ್ವ ಸೇರಿ ಐವರು ಅಂತರರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 17 ಲಕ್ಷ ರೂ. ಮೌಲ್ಯದ 7 ಕೆ.ಜಿ. ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ 5 ಲಕ್ಷ ರೂ. ಮೌಲ್ಯದ ಐ20 ಕಾರು ವಶಪಡಿಸಿಕೊಳ್ಳಲಾಗಿದೆ.


ಕಳೆದ ಆ.12ರ ರಾತ್ರಿ ಮಾನಜ್ಜ ಜ್ಯುವೆಲ್ಲರಿ ಅಂಗಡಿಯ ಶೆಟರ್ ಬೀಗ ಮುರಿದು ಒಳನುಗ್ಗಿದ್ದ ಆರೋಪಿಗಳು ಬೆಳ್ಳಿ ಆಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತೀವ್ರ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಸರಗಿ, ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಮಾರ್ಗದರ್ಶನದಲ್ಲಿ ಕಿತ್ತೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ‌.

Tags:

error: Content is protected !!