Accident

ಪ್ಯಾಂಟ್ ಜೇಬಿನಲ್ಲಿದ್ದ ಪವರ್ ಬ್ಯಾಂಕ್ ಬ್ಲಾಸ್ಟ್, ವ್ಯಕ್ತಿಗೆ ಗಾಯ!!

Share

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಚಲಿಸುವ ಮೊಬೈಲ್ ಪವರ್ ಬ್ಯಾಂಕ್ ಜೇಬಿನಲ್ಲೇ ಬ್ಲಾಸ್ಟ್ ಆದ ಭೀಕರ ಘಟನೆ ನಡೆದಿದೆ. ಧಗಧಗನೆ ಉರಿದ ಪವರ್ ಬ್ಯಾಂಕ್ ರಭಸಕ್ಕೆ ವ್ಯಕ್ತಿಯೊಬ್ಬರ ತೊಡೆ ಹಾಗೂ ಹೊಟ್ಟೆಯ ಭಾಗಕ್ಕೆ ತೀವ್ರ ಗಾಯಗಳಾಗಿವೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪವರ್ ಬ್ಯಾಂಕ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಸಿದ್ದು ಸಾಳುಂಕೆ ಎಂಬುವವರು ತಮ್ಮ ಪ್ಯಾಂಟ್ ಜೇಬಿನಲ್ಲಿ ಪವರ್ ಬ್ಯಾಂಕ್ ಇಟ್ಟುಕೊಂಡಿದ್ದಾಗ ಈ ಅನಾಹುತ ಸಂಭವಿಸಿದೆ. ಹಠಾತ್ತನೆ ಪವರ್ ಬ್ಯಾಂಕ್ ಬ್ಲಾಸ್ಟ್ ಆದ ರಭಸಕ್ಕೆ ಸಿದ್ದು ಅವರ ಹೊಟ್ಟೆ ಹಾಗೂ ತೊಡೆಯ ಭಾಗಕ್ಕೆ ಸುಟ್ಟ ಗಾಯಗಳಾಗಿವೆ. ತಕ್ಷಣವೇ ಗಾಯಾಳುವನ್ನು ಜಮಖಂಡಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಿಲ್ದಾಣದಂತಹ ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿರುವುದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.

Tags:

error: Content is protected !!