ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಕೃಷಿ ಚಟುವಟಿಕೆಗೆ ತೆರಳಿದ್ದ ಯುವಕನೊಬ್ಬ ವಿದ್ಯುತ್ ಸ್ಪರ್ಶಗೊಂಡು ಕೃಷ್ಣಾ ನದಿಗೆ ಬಿದ್ದು ನಾಪತ್ತೆಯಾಗಿದ್ದಾನೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಮೋಟಾರ್ ಪಂಪ್ ಸ್ಟಾರ್ಟ್ ಮಾಡಲು ತೆರಳಿದ್ದ ಬಸವರಾಜ ಐನಾಪುರ ಎಂಬ ಯುವಕನಿಗೆ ವಿದ್ಯುತ್ ಶಾಕ್ ತಗುಲಿ ನದಿ ನೀರುಪಾಲಾಗಿರುವ ದಾರುಣ ಘಟನೆ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಿಗ್ಗೆ ಎಂದಿನಂತೆ ಕೃಷಿ ಜಮೀನಿಗೆ ನೀರು ಹಾಯಿಸಲು ಹೋದಾಗ ಈ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನಾಪತ್ತೆಯಾಗಿರುವ ಯುವಕನಿಗಾಗಿ ತೀವ್ರ ಶೋಧ ಕಾರ್ಯವನ್ನು ಮುಂದುವರೆಸಿದ್ದಾರೆ.

