gokak

ಸಾಗರ್ ಕೋಲಕಾರ ಅವರಿಗೆ ಬೆಳಗಾವಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯತ್ವ

Share

ಬೆಳಗಾವಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ನೂತನ ಸದಸ್ಯರಿಗೆ ಗೋಕಾಕದ ಸಚಿವ ಸತೀಶ್ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಆದೇಶ ಪತ್ರ ವಿತರಿಸಲಾಯಿತು. ಇದೇ ವೇಳೆ ಸಾಗರ್ ಕೋಲಕಾರ ಅವರಿಗೆ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯತ್ವ ನೀಡಲಾಗಿದ್ದು, ಯುವ ನಾಯಕ ರಾಹುಲ್ ಜಾರಕಿಹೊಳಿ ಪ್ರಮಾಣಪತ್ರ ಹಸ್ತಾಂತರಿಸಿದರು.

ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಯನ್ವಯ ಬೆಳಗಾವಿ ಜಿಲ್ಲಾ ಧಾರ್ಮಿಕ ಪರಿಷತ್ತನ್ನು ನಾಲ್ಕು ವರ್ಷಗಳ ಅವಧಿಗೆ ನೂತನವಾಗಿ ರಚಿಸಲಾಗಿದೆ. ಈ ಪರಿಷತ್ತಿಗೆ ಆಯ್ಕೆಯಾದ ಸಾಗರ್ ಕೋಲಕಾರ ಅವರಿಗೆ ಗೋಕಾಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ವಿತರಿಸಲಾಗಿದ್ದು, ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ, ದೇವಾಲಯಗಳ ಸಂರಕ್ಷಣೆ ಹಾಗೂ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಪ್ರಮುಖ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ಸಂದರ್ಭದಲ್ಲಿ ನೂತನ ಸದಸ್ಯರು ಧಾರ್ಮಿಕ ಸಂಸ್ಥೆಗಳ ಪ್ರಗತಿಗೆ ಪರಿಣಾಮಕಾರಿಯಾಗಿ ಶ್ರಮಿಸಬೇಕೆಂದು ಆಶಿಸಿ ಶುಭ ಹಾರೈಸಲಾಯಿತು.

Tags:

error: Content is protected !!