Chikkodi

ಸತೀಶ್ ಜಾರಕಿಹೊಳಿ ಸಿಎಂ ಆಗಲು ಅರ್ಹರು: ಕೆಪಿಸಿಸಿ ಸದಸ್ಯ ಅರ್ಜುನ ನಾಯಿಕವಾಡಿ

Share

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಮಾತ್ರವಲ್ಲದೆ, ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆಗಳೂ ಇವೆ ಎಂದು ಕೆಪಿಸಿಸಿ ಸದಸ್ಯ ಅರ್ಜುನ ನಾಯಿಕವಾಡಿ ಹೇಳಿದ್ದಾರೆ.

ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರ ನಾಯಕತ್ವ ಮತ್ತು ಆಡಳಿತ ವೈಖರಿಯನ್ನು ಶ್ಲಾಘಿಸಿದರು.

ಇದೇ ವೇಳೆ ರಾಜ್ಯ ಸರ್ಕಾರದ ಆಡಳಿತದ ಕುರಿತು ಮಾತನಾಡಿದ ನಾಯಿಕವಾಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಅತ್ಯುತ್ತಮ ಆಡಳಿತ ನೀಡುತ್ತಿದೆ. ನೀರಾವರಿ ಯೋಜನೆಗಳು ಸೇರಿದಂತೆ ಹಲವು ಪ್ರಮುಖ ಅಭಿವೃದ್ಧಿ ಕಾಮಗಾರಿಗಳು ವೇಗವಾಗಿ ಪ್ರಗತಿಯಲ್ಲಿವೆ ಎಂದರು.

ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯಾದ್ಯಂತ ಅತ್ಯಂತ ಸಮರ್ಪಕವಾಗಿ ಜಾರಿಯಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ತಲುಪುತ್ತಿವೆ ಎಂದು ಅವರು ತಿಳಿಸಿದರು.

ಇನ್ನು ಸ್ಥಳೀಯರ ದೀರ್ಘಕಾಲದ ಬೇಡಿಕೆಯ ಕುರಿತು ಮಾತನಾಡಿ, ಶೀಘ್ರದಲ್ಲೇ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯಾಗಿ ಹೊರಹೊಮ್ಮಲಿದೆ‌ ಎಂಬ ವಿಶ್ವಾಸವನ್ನು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

Tags:

error: Content is protected !!