State

ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಪಡೆಯಲು ಸಿಎಂ ಬೆದರಿಕೆಯ ರೀತಿಯಲ್ಲಿ ನಡೆದುಕೊಂಡಿದ್ದಾರೆ; ಸಿಎಂ ಡಿ.ಕೆ.ಶಿವಕುಮಾರ್

Share

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ತಮ್ಮ ಇಷ್ಟವೀಗಲ್ಲದೆ ಬಲವಂತವಾಗಿ ರಾಜೀನಾಮೆ ನೀಡಬೇಕಾಯಿತು ಎಂದು ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಸ್ವತಃ ಮುಖ್ಯಮಂತ್ರಿಯವರೇ ಕಚೇರಿಗೆ ಬಂದು ಬಾಗಿಲುಹಾಕಿಕೊಂಡು ಬೆದರಿಕೆ ಹಾಕಿ, ತಮ್ಮಿಂದ ರಾಜೀನಾಮೆ ಪತ್ರ ಬರೆಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಸ್ಥಾನದಿಂದ ತಮ್ಮನ್ನು ಬಲವಂತವಾಗಿ ಕೆಳಗಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿಯಲ್ಲಿ ಮಾತನಾಡಿದ ಅವರು, ಜುಲೈ 24ರ ರಾತ್ರಿ 11 ಗಂಟೆಗೆ ಸಿಎಂ ಕರೆ ಮಾಡಿ ರಾಜೀನಾಮೆ ಕೇಳಿದ್ದರು. ಆ ಬಳಿಕ ಸ್ವತಃ ಸ್ಪೀಕರ್ ಕಚೇರಿಗೆ ಆಗಮಿಸಿದ ಮುಖ್ಯಮಂತ್ರಿಯವರು ಬಾಗಿಲು ಹಾಕಿಕೊಂಡು ಸುಮಾರು ಒಂದೂವರೆ ಗಂಟೆಗಳ ಕಾಲ ಕುಳಿತು, ದೌರ್ಜನ್ಯದ ರೀತಿಯಲ್ಲಿ ನನ್ನಿಂದ ರಾಜೀನಾಮೆ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಯಾವುದೇ ಕಾರಣವನ್ನು ನೀಡದೆ ತಮ್ಮಿಂದ ಬಲವಂತವಾಗಿ ರಾಜೀನಾಮೆ ಪತ್ರವನ್ನು ಟೈಪ್ ಮಾಡಿಸಿ ಸಹಿ ಹಾಕಿಸಿಕೊಳ್ಳಲಾಗಿದೆ ಹಾಗೂ ಆಪ್ತ ಕಾರ್ಯದರ್ಶಿಗೆ ಶಿರೋನಾಮೆಯ ಲೆಟರ್ ತರಲು ಸೂಚಿಸಿದ್ದರು ಎಂದು ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ತಾವು ಆಗಸ್ಟ್ 14ರಂದು ವಿಧಾನ ಪರಿಷತ್ ಅಧಿವೇಶನ ನಡೆಸಿ ಸದಸ್ಯರಿಗೆ ಧನ್ಯವಾದ ಅರ್ಪಿಸಿದ ಬಳಿಕ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದೆವು ಎಂದಿರುವ ಅವರು, ಈ ಘಟನೆಯು ತಮಗೆ ಬಹಳ ನೋವುಂಟು ಮಾಡಿದೆ ಎಂದು ತಿಳಿಸುವುದರ ಮೂಲಕ ಸಭಾಪತಿ ಸ್ಥಾನದಿಂದ ನಿರ್ಗಮಿಸಿದ ಬಳಿಕ ಮೊದಲ ಬಾರಿಗೆ ಬಹಿರಂಗವಾಗಿ ತಮ್ಮ ಮೌನ ಮುರಿದ್ದಾರೆ.

Tags:

error: Content is protected !!