ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹುಟ್ಟುಹಬ್ಬದ ಅಂಗವಾಗಿ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಶ್ರದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಗೌರವ ಸಲ್ಲಿಕೆ ನಡೆಯಿತು. ರಾಯಣ್ಣನ ಅಮರ ಸಮಾಧಿ ಸ್ಥಳಕ್ಕೆ ಖಾನಾಪುರ ತಹಶೀಲ್ದಾರ್ ದುಂಡಪ್ಪ ಕೋಮಾರ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತಿ ನಿಮಿತ್ತ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿರುವ ರಾಯಣ್ಣನ ಸಮಾಧಿ ಸ್ಥಳಕ್ಕೆ ತಹಶೀಲ್ದಾರ್ ದುಂಡಪ್ಪ ಕೋಮಾರ ಅವರು ಭೇಟಿ ನೀಡಿ ವಿಶೇಷ ಪೂಜೆ ಹಾಗೂ ನಮನ ಸಲ್ಲಿಸಿದರು. ತದನಂತರ ನಂದಗಡ ಪೊಲೀಸ್ ಠಾಣೆ ಬಳಿಯಿರುವ ರಾಯಣ್ಣನ ವೃತ್ತಕ್ಕೆ ತೆರಳಿ, ಅಲ್ಲಿನ ರಾಯಣ್ಣನ ಭವ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಠಕೇಕರ, ಗ್ರಾಮ ಆಡಳಿತಾಧಿಕಾರಿ ಮಹೇಶ್ ಬುರುಡ, ಗ್ರಾಮ ಸಹಾಯಕ ಇಬ್ರಾಹಿಮ್ ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
