Nippani

ನಿಪ್ಪಾಣಿಯಲ್ಲಿ ಲಾರಿಗಳ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; ₹2.47 ಲಕ್ಷ ಮೌಲ್ಯದ ಸೊತ್ತು ವಶ

Share

ನಿಪ್ಪಾಣಿ‌ ನಗರದ ವಿವಿಧ ಭಾಗಗಳಲ್ಲಿ ರಸ್ತೆಬದಿ ನಿಲ್ಲಿಸುತ್ತಿದ್ದ ಸರಕು ವಾಹನ ಹಾಗೂ ಲಾರಿಗಳಿಂದ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ನಿಪ್ಪಾಣಿ ಬಸವೇಶ್ವರ ಚೌಕ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ.

ಬಂಧಿತರನ್ನು ನಿಪ್ಪಾಣಿಯ ಆಂದೋಲನ ನಗರದ ನಿವಾಸಿಗಳಾದ ಅಮಿತ ರಾವಳ (19) ಮತ್ತು ಸಚಿನ ಸಾಳುಂಕೆ (21) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಒಟ್ಟು 2.47 ಲಕ್ಷ ರೂಪಾಯಿ ಮೌಲ್ಯದ 22 ವಿವಿಧ ಕಂಪನಿಗಳ ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ್ದ 2 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕಳೆದ ಮೂರು ತಿಂಗಳುಗಳಿಂದ ನಿಪ್ಪಾಣಿ ನಗರದ ವಿವಿಧ ಪ್ರದೇಶಗಳಲ್ಲಿ ರಾತ್ರಿ ವೇಳೆ ರಸ್ತೆಬದಿ ನಿಲ್ಲಿಸಿಡುತ್ತಿದ್ದ ಲಾರಿ ಹಾಗೂ ಸರಕು ಸಾಗಣೆ ವಾಹನಗಳನ್ನು ಗುರಿಯಾಗಿಸಿಕೊಂಡು ಬ್ಯಾಟರಿ ಕಳವು ಮಾಡಲಾಗುತ್ತಿತ್ತು. ಈ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಬಸವೇಶ್ವರ ಚೌಕ ಠಾಣೆಯ ಪೊಲೀಸರು, ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Tags:

error: Content is protected !!