ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಆದರ್ಶ, ದೇಶಪ್ರೇಮ ಹಾಗೂ ಶೌರ್ಯವನ್ನು ಸ್ಮರಿಸುವ ನಿಟ್ಟಿನಲ್ಲಿ ವಿಜಯಪುರದಲ್ಲಿ ಆ.23ರಂದು ಭವ್ಯ ‘ರಾಯಣ್ಣ ಜಾತ್ರೆ-2026’ ಆಯೋಜಿಸಲಾಗಿದೆ ಎಂದು ಸಂಗೊಳ್ಳಿ ರಾಯಣ್ಣ ಉತ್ಸವ ಸಮಿತಿಯ ಪ್ರಮುಖರು ತಿಳಿಸಿದರು.

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು ಈ ಜಾತ್ರೆಯನ್ನು ಆಯೋಜಿಸಲಾಗಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಿಂದ ರಾಯಣ್ಣ ಅಭಿಮಾನಿಗಳು, ಸಂಘಟನೆಗಳ ಪ್ರತಿನಿಧಿಗಳು, ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಜಾತ್ರೆಯ ಅಂಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭವ್ಯ ಮೂರ್ತಿಯ ಮೆರವಣಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಾಯಣ್ಣ ಅವರ ಶೌರ್ಯ, ದೇಶಭಕ್ತಿ ಹಾಗೂ ಹೋರಾಟದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಆ.23ರಂದು ನಡೆಯಲಿರುವ ಜಾತ್ರೆಯಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೂ ನಡೆಯಲಿದ್ದು, ರಾಯಣ್ಣ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಮಿತಿ ಮನವಿ ಮಾಡಿದೆ.
ಸಂಗೊಳ್ಳಿ ರಾಯಣ್ಣ ಉತ್ಸವ ಸಮಿತಿ, ವತಿಯಿಂದ ಸರ್ವರಿಗೂ ಜಾತ್ರೆಗೆ ಆತ್ಮೀಯ ಆಹ್ವಾನ ನೀಡಿದರು.
