ರೈತರ ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿಜಯಪುರ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಎಸ್ ಕೆ ಬೆಳ್ಳುಬ್ಬಿ ಮಾಜಿ ಶಾಸಕರು ಹಾಗೂ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಧರಣಿ ಮುಂದುವರಿದಿದ್ದು, ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಮೂರನೇ ದಿನದ ಧರಣಿಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ರೈತರ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಹಾಗೂ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
