11ನೇಯ ದಿನದ ಗಣಪತಿ ಮೂರ್ತಿ ವಿಸರ್ಜನೆ ಕಾರ್ಯಕ್ರಮವನ್ನು ಧಾರವಾಡದ ಸುತಗಟ್ಟಿ ಗ್ರಾಮದಲ್ಲಿ ಗಣಪತಿ ವಿಸರ್ಜನೆಯನ್ನು ಎತ್ತಿನ ಬಂಡೆಯ ಮೂಲಕ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಭಕ್ತಿಭಾವದೊಂದಿಗೆ ಜರುಗಿತ್ತು.


ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಸುತಗಟ್ಟಿ ಗ್ರಾಮದಲ್ಲಿ ಎತ್ತಿನ ಚಕ್ಕಡಿ ಮೂಲಕ ವಿಘ್ನ ನಿವಾರಕನ ಮೂರ್ತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಗ್ರಾಮಸ್ಥರು ನೇರವೇರಿಸಿದ್ದಾರೆ. ಭಕ್ತಿ ಭಾವದೊಂದಿಗೆ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ ಗ್ರಾಮಸ್ಥರು, ವಿಸರ್ಜನಾ ಕಾರ್ಯಕ್ರಮವನ್ನು ಅತ್ಯಂತ ಭಕ್ತಿ ಹಾಗೂ ಸಂಭ್ರಮದಿಂದ ಚಕ್ಕಡಿಯಲ್ಲಿ ಗಣಪತಿ ಮೆರವಣಿಗೆ ಮಾಡುವ ಮೂಲಕ ವಿಸರ್ಜನೆ ಮಾಡಿದರು. ಹನ್ನೊಂದು ದಿನಗಳ ಕಾಲ ಪ್ರತಿಷ್ಠಾಫಿಸಿದ್ದ ಗಣಪತಿ ಮೂರ್ತಿಯನ್ನು ಊರಿನ ಯುವಕರು ಹಿರಿಯರು ಸೇರಿ ಗಣಪತಿ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿದ ಚಕ್ಕಡಿಯಲ್ಲಿ ಕೂರಿಸಿ, ಭಜನಾ ತಂಡದೊಂದಿಗೆ ಊರಿನ ಪ್ರಮುಖ ಬಿದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಭಜನೆ, ಜೈಘೋಷ ಹಾಗೂ ಭಕ್ತಿಗೀತೆಗಳ ಮೂಲಕ ಗಣಪತಿಗೆ ಭಕ್ತಿಪೂರ್ವಕವಾಗಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಊರಿನ ಹಿರಿಯರು , ಯುವಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಮೆರಗು ತಂದಿದ್ದು, ನಗರದಲ್ಲಿ ಗಣಪತಿಬವಿಸರ್ಜನೆ ಮಾಡುವ ಜನರಿಗೆ ಸುತಗಟ್ಟಿ ಗ್ರಾಮಸ್ಥರು ಮಾದರಿಯಾಗಿದ್ದಾರೆ.
