Vijaypura

ರಸ್ತೆ ಪಕ್ಕ ನಿಂತಿದ್ದ ಟಿಪ್ಪರ್ ಲಾರಿಗೆ ದ್ವಿಚಕ್ರ ವಾಹನ ಢಿಕ್ಕಿ: ಪತಿ ಸಾವು, ಪತ್ನಿ ಸ್ಥಿತಿ ಗಂಭೀರ

Share

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಜಮ್ಮಲದಿನ್ನಿ ಕ್ರಾಸ್ ಬಳಿಯ ತಾಳಿಕೋಟೆ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಪಕ್ಕ ನಿಂತಿದ್ದ ಟಿಪ್ಪರ್ ಲಾರಿಗೆ ದ್ವಿಚಕ್ರ ವಾಹನ ಢಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪತ್ನಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ತಾಳಿಕೋಟೆ ತಾಲೂಕಿನ ಅಸ್ಕಿ ಗ್ರಾಮದ ಲಾಲಸಾಬ್ (45) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿ ಆಯೇಷಾ ಅವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಸಿಪಿಐ ಮಹಮ್ಮದ್ ಫಸೀಲುದ್ದೀನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!