ಬೆಳಗಾವಿಯಲ್ಲಿ ಸಂಭ್ರಮದಿಂದ ನಡೆಯುತ್ತಿರುವ ಗಣೇಶೋತ್ಸವದ ವಿಸರ್ಜನಾ ಕಾರ್ಯಕ್ರಮಗಳು ಯಾವುದೇ ಅಡೆತಡೆಯಿಲ್ಲದೆ, ಶಾಂತಿ ಮತ್ತು ಸೌಹಾರ್ದತೆಯಿಂದ ಜರುಗಬೇಕು. ಇದಕ್ಕಾಗಿ ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದ್ದು, ಅಧಿಕಾರಿಗಳು ಹಗಲಿರುಳು ಎಚ್ಚೆತ್ತುಕೊಂಡು ಕರ್ತವ್ಯ ನಿರ್ವಹಿಸುವಂತೆ ಹಿರಿಯ ಅಧಿಕಾರಿಗಳು ತಾಕೀತು ಮಾಡಿದ್ದಾರೆ.

ಇಂದು ಎಡಿಜಿಪಿ (ಕ ಕಾನೂನು ಮತ್ತು ಸುವ್ಯವಸ್ಥೆ) ಆರ್. ಹಿತೇಂದ್ರ ಐಪಿಎಸ್ ರವರು ಗಣೇಶೋತ್ಸವದ ವಿಸರ್ಜನಾ ಕಾರ್ಯಕ್ರಮದ ಭದ್ರತೆ ಹಾಗೂ ಸಿದ್ಧತೆಗಳ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯಲು ಅಗತ್ಯವಿರುವ ಬಿಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯ

ತೊಂದರೆಯಾಗದಂತೆ ಸೂಕ್ತ ಬಂದೋಬತ್ತ್ ಕಲ್ಪಿಸಲು ಕಟ್ಟುನಿಟ್ಟಿನ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ಬೆಳಗಾವಿ ಕಮಿಷ್ನರ್ ಪ್ರಕಾಶ್ ನಿಕಮ್ ಹಾಗೂ ಉತ್ತರ ವಲಯ ಐಜಿಪಿ ಸಂದೀಪ್ ಪಾಟೀಲ್ ಸೇರಿದಂತೆ ಇಲಾಖೆಯ ಪ್ರಮುಖ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಭದ್ರತಾ ನೀಲನಕ್ಷೆಯ ಬಗ್ಗೆ ಚರ್ಚಿಸಿದರು
