Belagavi

ವಂಟಮುರಿ ಕಾಲನಿ ಹಾಗೂ ಬಸವನ ಕುಡಚಿಯಲ್ಲಿ ನೂತನ ಅಂಗನವಾಡಿ ಕೇಂದ್ರಗಳ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Share

ಮಕ್ಕಳ ಸರ್ವಾಂಗೀಣ ವಿಕಾಸ ಹಾಗೂ ಆರಂಭಿಕ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ವಂಟಮುರಿ ಕಾಲನಿ ಮತ್ತು ಬಸವನ ಕುಡಚಿ ಪ್ರದೇಶಗಳಲ್ಲಿ ಎರಡು ಹೊಸ ಅಂಗನವಾಡಿ ಕೇಂದ್ರಗಳ ನಿರ್ಮಾಣ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಿ, ಶೈಕ್ಷಣಿಕ ಮೂಲಸೌಕರ್ಯ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರು ವಂಟಮುರಿ ಕಾಲನಿ ಹಾಗೂ ಬಸವನ ಕುಡಚಿ ಪ್ರದೇಶಗಳಲ್ಲಿ ನೂತನವಾಗಿ ನಿರ್ಮಿಸಲಾಗುವ ಎರಡು ಅಂಗನವಾಡಿ ಕೇಂದ್ರಗಳ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಯುವ ನಾಯಕ ಅಮಾನ್ ಸೇಠ್ ವಿಶೇಷವಾಗಿ ಉಪಸ್ಥಿತರಿದ್ದು ಮೆಚ್ಚುಗೆಗೆ ಪಾತ್ರರಾದರು. ಸ್ಥಳದಲ್ಲಿ ಜಮಾಯಿಸಿದ್ದ ಅಂಗನವಾಡಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಹಸನ್ಮುಖಿ ಸ್ಥಳೀಯ ನಿವಾಸಿಗಳು ಶಾಸಕರ ಈ ಜನಪರ ಕಾರ್ಯಕ್ಕೆ ತಮ್ಮ ಹರ್ಷವ್ಯಕ್ತಪಡಿಸಿ, ಧನ್ಯವಾದಗಳನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಆಸೀಫ್ ಸೇಠ್, ಮಕ್ಕಳ ಪ್ರಾಥಮಿಕ ಶಿಕ್ಷಣಕ್ಕೆ ನಮ್ಮ ಆಡಳಿತದಲ್ಲಿ ಸದಾ ಪ್ರಥಮ ಆದ್ಯತೆ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಹೈಟೆಕ್ ಸೌಲಭ್ಯಗಳೊಂದಿಗೆ ರೂಪುಗೊಳ್ಳಲಿರುವ ಈ ನೂತನ ಅಂಗನವಾಡಿ ಕೇಂದ್ರಗಳು ಪುಟಾಣಿಗಳ ಕಲಿಕೆ,

 

ಆರೋಗ್ಯ ಮತ್ತು ಪೌಷ್ಟಿಕಾಂಶದ ಬೆಳವಣಿಗೆಗೆ ಅತ್ಯಂತ ಸಹಕಾರಿಯಾಗಲಿವೆ ಎಂದರು. ಕ್ಷೇತ್ರದಾದ್ಯಂತ ಶೈಕ್ಷಣಿಕ ಮೂಲಸೌಕರ್ಯಗಳನ್ನು ಇನ್ನಷ್ಟು ಬಲಪಡಿಸುವ ಮತ್ತು ಬಡ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಇಂತಹ ಅಭಿವೃದ್ಧಿ ಕಾರ್ಯಗಳು ಮುಂದುವರಿಯಲಿವೆ ಎಂದು ಅವರು ಭರವಸೆ ನೀಡಿದರು

Tags:

error: Content is protected !!