ಅಥಣಿ : ಪಟ್ಟಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಆರ್ಎಸ್ಎಸ್ ಮುಖಂಡ ಅರವಿಂದ ದೇಶಪಾಂಡೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಾಘವೇಂದ್ರ ಮಠದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಸ್ನೇಹಿತನ ಕಾರಿನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ.
ಈ ಸಮಯದಲ್ಲಿ, ಕುಡಿದು ವಾಹನ ಚಲಾಯಿಸುತ್ತಿದ್ದ ಕಸ ವಿಲೇವಾರಿ ವಾಹನದ ಚಾಲಕ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ಸಂದರ್ಭದಲ್ಲಿ, ದೇವರ ಆಶೀರ್ವಾದದಿಂದ ನಾನು ಸಾವಿನಿಂದ ಪಾರಾಗಿದ್ದೇನೆ ಎಂದು ಆರ್ಎಸ್ಎಸ್ ಮುಖಂಡ ಅರವಿಂದ ದೇಶಪಾಂಡೆ ತಿಳಿಸಿದ್ದಾರೆ.
ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
