Belagavi

ಬೆಳಗಾವಿ: ಮಹಿಳೆಯರು, ಮಕ್ಕಳ ದೌರ್ಜನ್ಯ ಸಹಿಸಲ್ಲ: ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಎಚ್ಚರಿಕೆ

Share

ಬೆಳಗಾವಿ ಜಿಲ್ಲೆಯಲ್ಲಿ 159 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಎಚ್ಚರಿಕೆ ನೀಡಿದರು.

ಮಂಗಳವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬಿಮ್ಸ್ ಆಸ್ಪತ್ರೆಯಲ್ಲಿ ಗರ್ಭಿಣಿಯರು ರಕ್ತ ಪರೀಕ್ಷೆ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳಿಗೆ ಆಸ್ಪತ್ರೆಯೊಳಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅಗತ್ಯ ಪರೀಕ್ಷೆಗಳು ಸುಲಭವಾಗಿ ದೊರೆಯುವಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಅದೇ ರೀತಿ, ಆಸ್ಪತ್ರೆಯ ಎಲ್ಲ ಶೌಚಾಲಯಗಳನ್ನು ಕೂಡಲೇ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿ, ಸ್ವಚ್ಛತೆ ಹಾಗೂ ನಿರ್ವಹಣಾ ಕಾರ್ಯಗಳನ್ನು ತಕ್ಷಣ ಕೈಗೊಳ್ಳುವಂತೆ ಬಿಮ್ಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಮಹಿಳೆಯರು, ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗೌರವಯುತ, ಸುಲಭ ಹಾಗೂ ಗುಣಮಟ್ಟದ ಸೇವೆ ದೊರೆಯುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಮಹಿಳೆಯರ ಸುರಕ್ಷತೆ, ಗೌರವ ಮತ್ತು ಮೂಲಭೂತ ಸೌಲಭ್ಯಗಳ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ತಿಳಿಸಿದ್ದೇನೆ ಎಂದರು.

Tags:

error: Content is protected !!