Belagavi

ಬೆಳಗಾವಿ: ಕಳ್ಳಭಟ್ಟಿ ಮಾರಾಟದ ಮೇಲೆ ದಾಳಿ; ಓರ್ವ ಆರೋಪಿ ಬಂಧನ

Share

ಬೆಳಗಾವಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಸಾರಾಯಿ ಮಾರುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ, ಅಬಕಾರಿ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗಿದೆ.

ದಿನಾಂಕ 04/09/2026 ರಂದು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಮಚ್ಚೆ ಗ್ರಾಮದ ಹದ್ದಿಯ ಸಾರ್ವಜನಿಕ ಸ್ಥಳದಲ್ಲಿ ಸ್ವಂತ ಲಾಭಕ್ಕಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡಲು ನಿಂತಿದ್ದ ಪರಶುರಾಮು ಬಸಪ್ಪ ನಾಯಿಕ (35) ಎಂಬಾತನನ್ನು ಬಂಧಿಸಿದ್ದಾರೆ. ಪಿಎಸ್‌ಐ ವಿನೋದಕುಮಾರ ಸರನಾಯಿಕ ಹಾಗೂ ಸಿಬ್ಬಂದಿಯವರು ದಾಳಿ ನಡೆಸಿ, ಆರೋಪಿಯಿಂದ ಒಟ್ಟು 20 ಲೀಟರ್‌ಗಳಷ್ಟು ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags:

error: Content is protected !!