Belagavi

ಬೆಳಗಾವಿ: ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳ ಅರೆಸ್ಟ್. 2.65 ಲಕ್ಷ ರೂ. ಮೌಲ್ಯದ 8 ವಾಹನಗಳು ವಶ!

Share

ಬೆಳಗಾವಿ ನಗರದ ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ವಾಹನ ಕಳ್ಳತನ ಮಾಡಿದ್ದ ಕುಖ್ಯಾತ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಖಾದರವಾಡಿ ನಿವಾಸಿ ದೌಲತ ಮನೋಹರ ಪಾಟೀಲ ಎಂಬುವವರ ಮೋಟಾರ್ ಸೈಕಲ್ ಕಳುವಾದ ಬಗ್ಗೆ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಎಸಿಪಿ ಶೇಖರಪ್ಪ ಹೆಚ್. ಮಾರ್ಗದರ್ಶನ ಹಾಗೂ ಇನ್ಸ್‌ಪೆಕ್ಟರ್ ಮಹಾಂತೇಶ ಹೊಸಪೇಟೆ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡಿದ್ದರು. ಬಂಧಿತ ಆರೋಪಿಯನ್ನು ಅನಗೋಳದ ಜಟಪಟ ಕಾಲನಿ ನಿವಾಸಿ ರಿಯಾನ ಇಮ್ತಿಯಾಜ ಶೇಖ್ @ ರಮೇಶ ಅರ್ಜುನ ಶಿಂಧೆ ಎಂದು ಗುರುತಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಉದ್ಯಮಬಾಗ ಹಾಗೂ ಬೆಳಗಾವಿ ನಗರ ಮತ್ತು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಾಹನ ಕಳ್ಳತನ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. ಈತನಿಂದ ಒಟ್ಟು 2,65,000 ರೂಪಾಯಿ ಮೌಲ್ಯದ 7 ಮೋಟಾರ್ ಸೈಕಲ್‌ಗಳು ಮತ್ತು 1 ಸ್ಕೂಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಪೊಲೀಸ್ ಸಿಬ್ಬಂದಿಯ ಸಾಹಸವನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.

Tags:

error: Content is protected !!