Nandagad

ನಂದಗಡದಲ್ಲಿ ಶಾಂತಿ-ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸಿ: ಪಿಐ ರವಿಕುಮಾರ್ ಧರ್ಮಟ್ಟಿ ಕರೆ

Share

ಖಾನಾಪುರ ತಾಲ್ಲೂಕಿನ ನಂದಗಡ ಪೊಲೀಸ್ ಠಾಣಾ ಆವರಣದಲ್ಲಿ ಮುಂಬರುವ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಂತತಾ ಸಭೆ ಜರುಗಿತು. ಕಾನೂನು ಚೌಕಟ್ಟಿನಲ್ಲಿ ಹಬ್ಬವನ್ನು ಅತ್ಯಂತ ಸೌಹಾರ್ದಯುತವಾಗಿ ಹಾಗೂ ಭಕ್ತಿಭಾವದಿಂದ ಆಚರಿಸುವಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಗ್ರಾಮಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಂದಗಡ ಪೊಲೀಸ್ ಠಾಣೆಯಲ್ಲಿ ಆಯೋಜಿಸಲಾಗಿದ್ದ ಶಾಂತತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಿಐ ರವಿಕುಮಾರ್ ಧರ್ಮಟ್ಟಿ, ಮೇಲಾಧಿಕಾರಿಗಳ ನಿರ್ದೇಶನದಂತೆ ಈಗಾಗಲೇ ಗಂದಿಗವಾಡ, ಹಲಸಿ, ಬೀಡಿ ಹಾಗೂ ಮಂಗೇನಕೊಪ್ಪ ಸೇರಿದಂತೆ ವಿವಿಧೆಡೆ ಶಾಂತತಾ ಸಭೆಗಳನ್ನು ನಡೆಸಲಾಗಿದೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಯ ಪದಾಧಿಕಾರಿಗಳು ಮತ್ತು ಹಿರಿಯರು ಕಾನೂನು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಅನ್ಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.

ವಿದ್ಯುತ್ ಸಂಪರ್ಕ ಹಾಗೂ ಗ್ರಾಮ ಪಂಚಾಯಿತಿಯ ಅಧಿಕೃತ ಪರವಾನಿಗೆ ಪಡೆದುಕೊಳ್ಳುವುದು ಕಡ್ಡಾಯವಾಗಿದ್ದು, ಪೆಂಡಾಲ್ ವ್ಯವಸ್ಥೆಯಿಂದ ಹಿಡಿದು ಗಣೇಶ ಮೂರ್ತಿ ವಿಸರ್ಜನೆಯವರೆಗೆ ಎಲ್ಲಾ ಹಂತಗಳಲ್ಲೂ ನಿಯಮಗಳನ್ನು ಪಾಲಿಸಬೇಕು. ಸಾರ್ವಜನಿಕರು ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದೆ, ಎಲ್ಲರೊಂದಿಗೆ ಸೌಜನ್ಯದಿಂದ ವರ್ತಿಸಿ ಹಬ್ಬದ ಸಂದೇಶವನ್ನು ಶಾಂತಿಯುತವಾಗಿ ಸಾರಬೇಕು ಎಂದು ಪಿಐ ರವಿಕುಮಾರ್ ಧರ್ಮಟ್ಟಿ ನಂದಗಡ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಕರೆ ನೀಡಿದರು. ಈ ಸಭೆಯಲ್ಲಿ ಗ್ರಾಮದ ಹಿರಿಯರು ಮತ್ತು ಗಣ್ಯರು ಉಪಸ್ಥಿತರಿದ್ದರು.

Tags:

error: Content is protected !!