State

ದೇವನಹಳ್ಳಿಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Share

ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರದ ಮಹತ್ವದ ಮೈಲಿಗಲ್ಲು ನೆರವೇರಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನ ಸಂಸ್ಥೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಶಿಕ್ಷಣ ಅಭಿವೃದ್ಧಿಯ ಹೊಸ ಹಾದಿಗೆ ಚಾಲನೆ ನೀಡಿದ್ದಾರೆ.

ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಮ್ಯಾನೇಜ್ಮೆಂಟ್‌ನ ಉದ್ಘಾಟನೆ ಹಾಗೂ ನಾರೇಯಣ ಪ್ರಜ್ಞಾಲಯದ ಶಂಕುಸ್ಥಾಪನಾ ಸಮಾರಂಭ ಸೋಮವಾರ ವಿಜೃಂಭಣೆಯಿಂದ ನೆರವೇರಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗೋಕುಲ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಕುಲಪತಿ ಡಾ. ಎಂ.ಆರ್. ಜಯರಾಂ, ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಆರ್. ಸೀತಾರಾಂ, ಆಡಳಿತ ಮಂಡಳಿ ಸದಸ್ಯ ಡಾ. ಎಂ.ಎಂ. ಪಲ್ಲಂ ರಾಜು ಹಾಗೂ ಆಲ್ಬನಿ ವಿಶ್ವವಿದ್ಯಾಲಯದ ಅಧ್ಯಕ್ಷ ಹವಿಡನ್ ರೋಡ್ರಿಗಸ್ ಸೇರಿದಂತೆ ಹಲವು ಶಿಕ್ಷಣ ತಜ್ಞರು ಮತ್ತು ಪ್ರಮುಖ ಗಣ್ಯರು ಉಪಸ್ಥಿತರಿದ್ದರು.

Tags:

error: Content is protected !!