ಖಾನಾಪುರದ ಚಿಕ್ಕಮುನವಳ್ಳಿಯ ಐತಿಹಾಸಿಕ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಶತಮಾನೋತ್ಸವದ ಅಂಗವಾಗಿ, ಶಾಸಕ ವಿಠ್ಠಲ ಹಲಗೇಕರ ಅವರು ವಿಶೇಷವಾಗಿ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.


ಖಾನಾಪೂರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯು 100 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದು, ಈ ಐತಿಹಾಸಿಕ ಶಾಲೆಯ ಶತಮಾನೋತ್ಸವದ ಅಂಗವಾಗಿ ಶಾಸಕ ವಿಠ್ಠಲ ಹಲಗೇಕರ ಅವರು ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಆಧುನಿಕ ಸೌಲಭ್ಯಗಳು ಸಿಗುವಂತೆ ಮಾಡಲು ನಾವು ಕಟಿಬದ್ಧರಾಗಿದ್ದೇವೆ ಎಂದು ತಿಳಿಸಿ, ಜ್ಞಾನಮಂದಿರದ ಮುಂದಿನ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಶಾಲೆಯ ಶಿಕ್ಷಕ ವೃಂದ, ಶಿಕ್ಷಣ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು, ಯುವಕ ಬಂಧುಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

