Chikkodi

ರೈತರ ಪಂಪಸೆಟ್‌ಗಳಿಗೆ ಸತತ 6 ಗಂಟೆ ವಿದ್ಯುತ್ ನೀಡಲು ಆಗ್ರಹ: ಕಚೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ

Share

ತಾಲೂಕಿನ ರೈತರ ಕೃಷಿ ಪಂಪಸೆಟ್‌ಗಳಿಗೆ ದಿನಂಪ್ರತಿ ಸತತ 6 ಗಂಟೆಗಳ ಕಾಲ ಯಾವುದೇ ವ್ಯತ್ಯಯವಿಲ್ಲದೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ರೈತರು ಚಿಕ್ಕೋಡಿ ವಿದ್ಯುತ್ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಶ್ರೀಮಂತ ಬಂಡಗರ ಅವರಿಗೆ ಮನವಿ ಸಲ್ಲಿಸಿದರು.

ಪ್ರಸ್ತುತ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ಅಭಾವದಿಂದಾಗಿ ಬೆಳೆಗಳು ಒಣಗುವ ಹಂತ ತಲುಪಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಇಲಾಖೆಯು ತಕ್ಷಣವೇ ಎಚ್ಚೆತ್ತುಕೊಂಡು ಪಂಪಸೆಟ್‌ಗಳಿಗೆ ಕನಿಷ್ಠ 6 ಗಂಟೆಗಳ ಕಾಲ ಸತತ ಹಾಗೂ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಒಂದು ವೇಳೆ ಈ ಗಂಭೀರ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸದಿದ್ದರೆ, ಮುಂಬರುವ ದಿನಗಳಲ್ಲಿ ವಿದ್ಯುತ್ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಹಾಂತೇಶ ಕವಟಗಿಮಠ ಹಾಗೂ ರೈತ ಮುಖಂಡರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಶೇಖರ ಅರಭಾವಿ, ಮಹಾಂತೇಶ ಭಾತೆ, ಬಸವರಾಜ ಭಾತೆ, ಅನೀಲ ಪಾಟೀಲ, ಷಡಕ್ಷರಿ ಮೂಗೇರಿ, ಬಸವರಾಜ ಪಾಟೀಲ, ವಿಜಯ ಕೋಟಿವಾಲೆ ಸೇರಿದಂತೆ ನೂರಾರು ರೈತ ಬಾಂಧವರು ಉಪಸ್ಥಿತರಿದ್ದರು.

Tags:

error: Content is protected !!