Vijaypura

ಚುನಾವಣಾ ಆಯೋಗ ಆಯುಕ್ತ ಜ್ಞಾನೇಶ್‌ ಕುಮಾರ್‌ ಬಂಧನಕ್ಕೆ ಆಗ್ರಹ: ವಿಜಯಪುರದಲ್ಲಿ ಕಾಂಗ್ರೆಸ್‌ ಪ್ರತಿಭಟನೆ

Share

ಎಸ್‌ಐಆರ್‌ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಎಸ್‌ಐಆರ್‌ ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ವಿಚಾರವಾಗಿ ಕಾಂಗ್ರೆಸ್‌ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇದರ ಭಾಗವಾಗಿ ವಿಜಯಪುರದಲ್ಲೂ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಎಸ್‌ಐಆರ್‌ ಹೆಸರಿನಲ್ಲಿ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗ ಬಾರದು ಎಂದು ಅವರು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಲಾಯಿತು. ಇದೇ ವೇಳೆ ಪ್ರತಿಭಟನಾಕಾರರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಮುಖಂಡರಾದ ಅಬ್ದುಲ್‌ ಹಮೀದ್‌ ಮುಶ್ರಫ್‌, ಡಾ. ಪ್ರಭುಗೌಡ, ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಬೈಟ್:

Tags:

error: Content is protected !!