Vijaypura

ಮತ್ತೆ ಕಂಪಿಸಿದ ಭೂಮಿ..! ಬಸವನ ಬಾಗೇವಾಡಿಯಲ್ಲಿ 3.5 ತೀವ್ರತೆ

Share

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನಲ್ಲಿ ಮತ್ತೆ ಭೂಮಿ ಕಂಪಿಸಿದೆ. ಬುಧವಾರ ನಸುಕಿನ 2.04ರ ಸುಮಾರಿಗೆ 3.5 ತೀವ್ರತೆಯ ಲಘು ಭೂಕಂಪನ ಸಂಭವಿಸಿದೆ. ಸೋಮವಾರ ಮಧ್ಯರಾತ್ರಿ ಕೂಡ ಇದೇ ತಾಲ್ಲೂಕಿನಲ್ಲಿ 3.5 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಎರಡು ದಿನಗಳ ಅಂತರದಲ್ಲಿ ಎರಡು ಬಾರಿ ಭೂಕಂಪನ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಮಾಹಿತಿಯಂತೆ, ಬುಧವಾರ ನಸುಕಿನ 2.04ರ ಸುಮಾರಿಗೆ ಬಸವನಬಾಗೇವಾಡಿ ಪಟ್ಟಣದ ಈಶಾನ್ಯ ದಿಕ್ಕಿನಲ್ಲಿ ಸುಮಾರು 3.9 ಕಿ.ಮೀ. ದೂರದಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿದೆ. ಭೂಮಿಯಿಂದ 10 ಕಿ.ಮೀ. ಆಳದಲ್ಲಿ ಸಂಭವಿಸಿದ ಭೂಕಂಪನವು ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. ಇದಕ್ಕೂ ಮೊದಲು ಸೋಮವಾರ ಮಧ್ಯರಾತ್ರಿ 12.26ರ ಸುಮಾರಿಗೆ ತಾಲ್ಲೂಕಿನ ದಿಂಡಿವಾರ ಗ್ರಾಮ ಪಂಚಾಯಿತಿ ಕಚೇರಿಯಿಂದ ಸುಮಾರು 1.1 ಕಿ.ಮೀ. ನೈಋತ್ಯ ದಿಕ್ಕಿನಲ್ಲಿ 10 ಕಿ.ಮೀ. ಆಳದಲ್ಲಿ ಲಘು ಭೂಕಂಪನ ಸಂಭವಿಸಿತ್ತು. ಆ ಭೂಕಂಪನವೂ 3.5 ತೀವ್ರತೆ ದಾಖಲಾಗಿತ್ತು.

Tags:

error: Content is protected !!