Belagavi

ಬೆಳಗಾವಿಯಲ್ಲಿ ಎಂಜಿನಿಯರ್ಸ್ ಡೇ ಆಚರಣೆ: ಅಭಿವೃದ್ಧಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಹಿರಿದು – ಶಾಸಕ ಆಸೀಫ್ ಸೇಠ್

Share

ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ ಅವರ ಜನ್ಮದಿನದ ಅಂಗವಾಗಿ ಬೆಳಗಾವಿಯಲ್ಲಿ ಇತ್ತೀಚೆಗೆ ‘ಎಂಜಿನಿಯರ್ಸ್ ಡೇ-2026’ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಾಡಿನ ಅಭಿವೃದ್ಧಿಯಲ್ಲಿ ಎಂಜಿನಿಯರ್‌ಗಳ ಕೊಡುಗೆ ಅಪಾರವಾಗಿದ್ದು, ಗುಣಮಟ್ಟದ ಕಾಮಗಾರಿಗಳ ಮೂಲಕ ಸಮಾಜದಮುಖಿ ಕಾರ್ಯಗಳನ್ನು ಮಾಡಬೇಕೆಂದು ಶಾಸಕ ಆಸೀಫ್ ಸೇಠ್ ಕರೆ ನೀಡಿದರು.

ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗಗಳು ಬೆಳಗಾವಿ ಮತ್ತು ಚಿಕ್ಕೋಡಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಇಂಜಿನಿಯರ್ಸ್ ಡೇ-2026 ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅಸೀಫ್ ಸೇಠ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಮೂಲಭೂತ ಸೌಕರ್ಯಗಳ ನಿರ್ಮಾಣ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ ಎಂದು ಬಣ್ಣಿಸಿದರು. ಯೋಜನೆಗಳ ಸರಿಯಾದ ರೂಪುರೇಷೆ ಹಾಗೂ ಕಾಲಮಿತಿಯೊಳಗೆ ಕಾಮಗಾರಿ ಮುಗಿಸುವುದು ಸುಸ್ಥಿರ ಅಭಿವೃದ್ಧಿಗೆ ಬಹಳ ಮುಖ್ಯ ಎಂದರು.


ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ರಾಹುಲ್ ಶಿಂಡೆ, ಐ.ಎ.ಎಸ್., ಸೇರಿದಂತೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಮತ್ತು ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಎಂಜಿನಿಯರ್‌ಗಳ ಸಮಾಜಮುಖಿ ಸೇವೆಯನ್ನು ಸ್ಮರಿಸುತ್ತಾ, ಉತ್ತಮ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

Tags:

error: Content is protected !!